ನಾಪತ್ತೆಯಾಗಿದ್ದ ಕೈ ಅತೃಪ್ತ ಶಾಸಕ ಉಮೇಶ್ ಜಾಧವ್ ಇಂದು ಪ್ರತ್ಯಕ್ಷ

ಕಲಬುರಗಿ: ಕಾಂಗ್ರೆಸ್‌ ಅತೃಪ್ತ ಶಾಸಕರ ಪಟ್ಟಿಯಲ್ಲಿ ಗುರುತಿಸಿಕೊಂಡಿದ್ದ ಚಿಂಚೋಳಿ ಶಾಸಕ ಉಮೇಶ್‌ ಜಾಧವ್‌ ಅವರಿಂದು ಸ್ವಕ್ಷೇತ್ರಕ್ಕೆ ಆಗಮಿಸಿದ್ದಾರೆ ಎನ್ನಲಾಗಿದೆ.

ನಿನ್ನೆ ತಡರಾತ್ರಿ ಹೈದ್ರಾಬಾದ್‌ನಿಂದ ಚಿಂಚೋಳಿ ತಾಲೂಕಿನ ಬೆಟಸೂರು ತಾಂಡಾಕ್ಕೆ ಆಗಮಿಸಿರುವ ಜಾಧವ್‌, ಬೆಟಸೂರ ಗ್ರಾಮದಲ್ಲಿರುವ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದಾರೆ.

ಇಂದು ತಂದೆ ಗೋಪಾಲರಾವ್ ಅವರ 36 ನೇ ಪುಣ್ಯಸ್ಮರಣೆಯಿರುವುದರಿಂದ ಮುಂಜಾನೆ 9.30ಕ್ಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪುಣ್ಯಸ್ಮರಣೆ ಬಳಿಕ ಸ್ವಕ್ಷೇತ್ರಕ್ಕೆ ತೆರಳಲಿದ್ದಾರೆ.

ಕಳೆದ 15 ದಿನಗಳಿಂದಲೂ ಅಜ್ಞಾತ ಸ್ಥಳದಲ್ಲಿದ್ದ ಉಮೇಶ್ ಜಾಧವ್‌ ಅವರು, ಇಂದು ಚಿಂಚೋಳಿ ಕ್ಷೇತ್ರದ ಕೈ ಕಾರ್ಯಕರ್ತರ ಜತೆ ಸಭೆ ನಡೆಸಲಿದ್ದಾರೆ. ಕಾರ್ಯಕರ್ತರ ಸಭೆಯ ಬಳಿಕ ಚಿಂಚೋಳಿಯಿಂದ ಹೈದ್ರಾಬಾದ್‌ಗೆ ತೆರಳಿ ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಬಳಿಕ ತಮ್ಮ ಮುಂದಿನ ನಡೆ ಏನೆಂದು ನಿರ್ಧರಿಸಲಿದ್ದಾರೆ ಎನ್ನಲಾಗಿದೆ. (ದಿಗ್ವಿಜಯ ನ್ಯೂಸ್)