ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

death jaipura
Published on

ಕುಂದಾಪುರ: ನಾಪತ್ತೆಯಾಗಿದ್ದ ಹೆಮ್ಮಾಡಿಯ ಪ್ರಥಮ ಪಿಯುಸಿ ವಿದ್ಯಾರ್ಥಿ ನಮೇಶ್ (17) ಎಂಬಾತನ ಮೃತದೇಹ ಶನಿವಾರ ಬೆಳಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ. ಹೆಮ್ಮಾಡಿ ಸಂತೋಷನಗರದ ನಿವಾಸಿ ಲವೇಶ್ ಪೂಜಾರಿ ಅವರ ಪುತ್ರ ನಮೇಶ್ ಗುರುವಾರ ಕಾಲೇಜಿನಿಂದ ಹೊರಟವನು ಮನೆಗೆ ಬಾರದೆ ನಾಪತ್ತೆಯಾಗಿದ್ದ.

ಬೈಕ್ ಹಾಗೂ ಕಾಲೇಜು ಬ್ಯಾಗ್ ಹೆಮ್ಮಾಡಿ ಸಮೀಪದ ಕನ್ನಡಕುದ್ರು ನದಿತೀರದಲ್ಲಿ ಪತ್ತೆಯಾಗಿತ್ತು. ಆತ ನದಿಗೆ ಬಿದ್ದಿರಬಹುದೆಂಬ ಕುಟುಂಬದ ದೂರಿನ ಮೇರೆಗೆ ಕುಂದಾಪುರ ನಗರ ಠಾಣೆ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಈಜುಗಾರರು ಎರಡು ದಿನಗಳ ಕಾಲ ತೀವ್ರ ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಶನಿವಾರ ಬೆಳಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಮೃತದೇಹ ಪತ್ತೆಯಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net