More

    ಮಿಷನ್ ಇಂದ್ರಧನುಷ್ ಲಸಿಕೆ ಕಡ್ಡಾಯ

    ಯಲಬುರ್ಗಾ: ಪ್ರತಿಯೊಬ್ಬ ಪಾಲಕರು ಮಕ್ಕಳಿಗೆ ಮಿಷನ್ ಇಂದ್ರಧನುಷ್ ಲಸಿಕೆ ಕಡ್ಡಾಯವಾಗಿ ಹಾಕಿಸಬೇಕು. ಇದರಿಂದ ಮಗು ಆರೋಗ್ಯವಾಗಿರಲು ಸಹಕಾರಿಯಾಗುತ್ತದೆ ಎಂದು ತಾಪಂ ಇಒ ಸಂತೋಷ ಪಾಟೀಲ್ ಸಲಹೆ ನೀಡಿದರು.

    ಇದನ್ನೂ ಓದಿ: ಪ್ರತಿಯೊಬ್ಬ ಮಗುವಿಗೆ ಲಸಿಕೆ ನೀಡಿ

    ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಇಂದ್ರಧನುಷ್ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
    ಆರೋಗ್ಯವಂತ ಸಮಾಜ ನಿರ್ಮಿಸುವ ಗುರಿ ಹಿನ್ನೆಲೆಯಲ್ಲಿ 5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರು ಮಿಷನ್ ಇಂದ್ರಧನುಷ್ ಲಸಿಕೆ ತಪ್ಪದೇ ಹಾಕಿಸಿಕೊಳ್ಳಿ.

    ಇದು ನಾನಾ ರೋಗಗಳನ್ನು ತಡೆಯಲು ಸಂಜೀವಿನಿಯಾಗಲಿದೆ. ಯಾವುದೇ ಮಗು ಕೂಡಾ ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಜನರು ಸಹಕಾರ ನೀಡುವ ಮೂಲಕ ಅಭಿಯಾನ ಯಶಸ್ವಿಗೊಳಿಸಿ ಎಂದರು.

    ಗ್ರೇಡ್ 2 ತಹಸೀಲ್ದಾರ್ ನಾಗಪ್ಪ ಸಜ್ಜನ ಮಾತನಾಡಿ, ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಗಮನ ಹರಿಸುವ ಮೂಲಕ ಸಾರ್ವಜನಿಕರ ಆರೋಗ್ಯ ಹಿತ ದೃಷ್ಠಿಯಿಂದ ಅನೇಕ ಯೋಜನೆ ಜಾರಿಗೊಳಿಸಿದೆ. ಅವುಗಳ ಸದುಪಯೋಗ ಪಡೆಯಬೇಕು ಎಂದರು.

    ಟಿಎಚ್‌ಓ ಡಾ.ರಚನಾ, ಮುಖ್ಯ ವೈದ್ಯಾಧಿಕಾರಿ ಡಾ.ಕೃಷ್ಣ ಹೊಟ್ಟಿ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶಶಿಧರ ಉಳ್ಳಾಗಡ್ಡಿ, ಪ್ರಕಾಶ ಛಲವಾದಿ, ವಿ.ಎಸ್.ಶಿವಪ್ಪಯ್ಯನಮಠ, ಅಬ್ದುಲ್ ಮುನಾಫ್, ಆರೋಗ್ಯ ನಿರೀಕ್ಷಣಾಧಿಕಾರಿ ಚನ್ನಬಸಯ್ಯ ಸರ್‌ಗಣಾಚಾರ, ವೈಜನಾಥ ಚಿರಳ್ಳಿ, ಆಶಾ ತಾಲೂಕು ಸಂಯೋಜಕಿ ಮಂಜುಳಾ ಛಲವಾದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts