More

    ದ್ವಿತೀಯ ಸುತ್ತಿನ ಮಿಷನ್ ಇಂಧ್ರಧನುಷ್ 11ರಿಂದ

    ಧಾರವಾಡ: ಜಿಲ್ಲೆಯಲ್ಲಿ ಸೆ. 11ರಿಂದ 16ರವರೆಗೆ ಜರುಗಲಿರುವ ೨ನೇ ಸುತ್ತಿನ ಮಿಷನ್ ಇಂಧ್ರಧನುಷ್ ಲಸಿಕಾ ಅಭಿಯಾನವನ್ನು ಯಶಸ್ವಿಯಾಗಿ ಸಂಘಟಿಸಲು ಇಲಾಖಾ ಅಽಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಽಕಾರಿ ಗುರುದತ್ತ ಹೆಗಡೆ ಹೇಳಿದರು.
    ತಮ್ಮ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಮಿಷನ್ ಇಂಧ್ರಧನುಷ್ 5.0 ಲಸಿಕಾ ಕಾರ್ಯಕ್ರಮ ಅನುಷ್ಠಾನದ ಕುರಿತ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
    ಆರೋಗ್ಯ ಇಲಾಖೆಯ ಅಽಕಾರಿಗಳು ಅಭಿಯಾನದ ಯಶಸ್ಸಿಗೆ ಕ್ರಿಯಾಯೋಜನೆ ರೂಪಿಸಿಕೊಳ್ಳಬೇಕು. ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಭಾರತೀಯ ವೈದ್ಯಕೀಯ ಸಂಘ, ರೋಟರಿ, ಲಯನ್ಸ್ ಮುಂತಾದ ಸರ್ಕಾರೇತರ ಸಂಸ್ಥೆಗಳೊ0ದಿಗೆ ಸಮನ್ವಯತೆಯಿಂದ ಅಭಿಯಾನವನ್ನು ಅನುಷ್ಠಾನಗೊಳಿಸಬೇಕು ಎಂದರು.
    ಮುಖ್ಯವಾಗಿ 5 ವರ್ಷದೊಳಗಿನ ಲಸಿಕೆ ವಂಚಿತ ಮಕ್ಕಳು ಹಾಗೂ ನಿಯಮಿತವಾಗಿ ಲಸಿಕೆ ಪಡೆಯದ ಗರ್ಭಿಣಿಯರು ಈ ಇಂಧ್ರಧನುಷ್ ಲಸಿಕಾ ಅಭಿಯಾನದಲ್ಲಿ ಪ್ರಯೋಜನ ಪಡೆಯುವಂತೆ ಜಾಗೃತಿ ಮೂಡಿಸಬೇಕು. ಅಭಿಯಾನದ ಕುರಿತು ವ್ಯಾಪಕ ಪ್ರಚಾರ ಮಾಡಬೇಕು ಎಂದರು.
    ಜಿಲ್ಲಾ ಆರೋಗ್ಯ ಅಽಕಾರಿ ಡಾ. ಶಶಿ ಪಾಟೀಲ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಪದ್ಮಾವತಿ, ಜಿಲ್ಲಾ ಶಸ್ತçಚಿಕಿತ್ಸಕ ಡಾ. ಸಂಗಪ್ಪ ಗಾಬಿ, ವಿಶ್ವ ಆರೋಗ್ಯ ಸಂಸ್ಥೆಯ ತಜ್ಞ ವೈದ್ಯ ಡಾ. ಸಿದ್ದಲಿಂಗಯ್ಯ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts