2 ಕೋಟಿ ರೂ. ವೆಚ್ಚದಲ್ಲಿ ಮಿತ್ತಮಜಲು ಕ್ಷೇತ್ರ ಅಭಿವೃದ್ಧಿ: ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ಮಾಹಿತಿ

Btw_Mittamajalu
Published on

ಬಂಟ್ವಾಳ: ಪುರಾತನ ದೈವಕ್ಷೇತ್ರವಾಗಿರುವ ಸಜೀಪಮಾಗಣೆಯ ಮಿತ್ತಮಜಲು ಕ್ಷೇತ್ರ ಅಂದಾಜು 2 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಳ್ಳುತ್ತಿದ್ದು 3 ಗೋಪುರಗಳ ಪುನಃನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯ ನಡೆಯುತ್ತಿವೆ ಎಂದು ಸಜೀಪಮಾಗಣೆಯ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ಹೇಳಿದರು.

ಭಾನುವಾರ ಮಾರ್ನಬೈಲು ಶ್ರೀ ಅಯ್ಯಪ್ಪ ಮಂದಿರದಲ್ಲಿ ಸಜೀಪ ಮಾಗಣೆಯ ಮಿತ್ತಮಜಲು ಶ್ರೀ ನಡಿಯೇಲು ದೈಯ್ಯಂಗುಲು, ಶ್ರೀ ಉಳ್ಳಾಲ್ತಿ ಹಾಗೂ ಶ್ರೀ ನಾಲ್ಕೈತ್ತಾಯ ಹಾಗೂ ಪರಿವಾರ ದೈವಗಳ ಕ್ಷೇತ್ರದ ನವೀಕೃತ ಗೋಪುರ ಲೋಕಾರ್ಪಣೆ, ಸಾನ್ನಿಧ್ಯ ಕಲಶಾದಿ ಕಾರ್ಯಕ್ರಮದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.

ಎ.2ಮತ್ತು 3ರಂದು ಕಾರ್ಯಕ್ರಮ ನಡೆಯಲಿದ್ದು ಹೊರೆಕಾಣಿಕೆ, ಅನ್ನದಾನ, ಸ್ವಚ್ಛತೆಯ ಕಾರ್ಯದಲ್ಲಿ ಗ್ರಾಮಸ್ಥರೆಲ್ಲರೂ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ವಿನಂತಿಸಿದರು.

ಅಯ್ಯಪ್ಪ ಮಂದಿರದ ಅಭಿವೃದ್ಧಿ ಮತ್ತು ಭೂಮಿ ಖರೀದಿ ಸಂಕಲ್ಪದ ಸಾಕಾರಕ್ಕಾಗಿ ಶ್ರೀ ದೇವರಿಗೆ 18 ಗುರುವಾರ ನಡೆಯಲಿರುವ ಪಂಚಾರತಿ ಸೇವೆಯ ಆಮಂತ್ರಣ ಬಿಡುಗಡೆಗೊಳಿಸಲಾಯಿತು.

ಹೊರೆಕಾಣಿಕೆ ಸಮರ್ಪಣೆ ಮುಖ್ಯ ಸಂಚಾಲಕ ಜಯಶಂಕರ ಬಾಸ್ರಿತ್ತಾಯ, ಜತೆಕೋಶಾಧಿಕಾರಿ ಶಿವಪ್ರಸಾದ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀಕಾಂತ ಶೆಟ್ಟಿ ಸಂಕೇಶ, ಜತೆಕಾರ್ಯದರ್ಶಿ ರತ್ನಾಕರ ಪೂಜಾರಿ ನಡಾರ್, ಮಾರ್ನಬೈಲು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಗೌರವಾಧ್ಯಕ್ಷರಾದ ಸಂಜೀವ ಗುರುಸ್ವಾಮಿ, ಕೃಷ್ಣ ಗುರುಸ್ವಾಮಿ, ಅಯ್ಯಪ್ಪ ಸ್ವಾಮಿ ಮಂದಿರದ ಆಡಳಿತ ಟ್ರಸ್ಟ್ ಅಧ್ಯಕ್ಷ ಪುರುಷೋತ್ತಮ ಪೂಜಾರಿ, ಮಾತೃ ಮಂಡಳಿ ಅಧ್ಯಕ್ಷೆ ಗಾಯತ್ರಿ ಆರ್.ಕಂಬಳಿ ಉಪಸ್ಥಿತರಿದ್ದರು.

ಅಭಿವೃದ್ಧಿ ಸಮಿತಿ ಅಧ್ಯಕ್ಷ ದಾಮೋದರ ಬಿ.ಎಂ. ಸ್ವಾಗತಿಸಿದರು. ಕಾರ್ಯದರ್ಶಿ ಅಶೋಕ್ ಗಟ್ಟಿ ನಂದಾವರ ವಂದಿಸಿದರು. ಕೇಶವ ಮಾಸ್ತರ್ ಮಾರ್ನಬೈಲ್ ನಿರೂಪಿಸಿದರು. ಕಾರ್ಯದರ್ಶಿ ಯಶವಂತ ಹಾಗೂ ಇತರ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net