More

    ನವಲಗುಂದ ಲಾಕ್​ಡೌನ್​ಗೆ ಮಿಶ್ರ ಪ್ರತಿಕ್ರಿಯೆ

    ನವಲಗುಂದ: ಕರ್ನಾಟಕ ಸಮಗ್ರ ಜ್ಯಾತ್ಯತೀತ- ಪಕ್ಷಾತೀತ ಮಹದಾಯಿ, ಕಳಸಾ ಬಂಡೂರಿ ರೈತ ಕಾರ್ವಿುಕರ, ಮಹಿಳೆಯರ ರೈತ ಹೋರಾಟ ಒಕ್ಕೂಟದ ಅಧ್ಯಕ್ಷ ಲೋಕನಾಥ ಹೆಬಸೂರ ನೇತೃತ್ವದಲ್ಲಿ ಗುರುವಾರ ನಡೆದ ಲಾಕ್​ಡೌನ್ ರೈತ ಹೋರಾಟಕ್ಕೆ ಪಟ್ಟಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೋರಾಟದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ರೈತರು ಎತ್ತು, ಚಕ್ಕಡಿ, ಟ್ರ್ಯಾಕ್ಟರ್ ಸಮೇತ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿದರು.

    ಈ ವೇಳೆ ರೈತ ಮುಖಂಡ ಲೋಕನಾಥ ಹೆಬಸೂರ ಮಾತನಾಡಿ, ಮಹದಾಯಿ ವಿಳಂಬಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸ್ಥಳೀಯ ನಾಯಕರು ನಿಷ್ಕಾಳಜಿಯಿಂದಾಗಿ ನನೆಗುದಿಗೆ ಬಿದ್ದಿದೆ. ಇನ್ನೂ, ಪೆಟ್ರೋಲ್, ಡೀಸೆಲ್, ಎಲ್​ಪಿಜಿ ಹಾಗೂ ಅಗತ್ಯ ವಸ್ತುಗಳ ದರ ಹೆಚ್ಚಿಸಿ ಬಡವರ, ರೈತರ, ಕೂಲಿಕಾರ್ವಿುಕರ ಬದುಕದಂತ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ. ಫಸಲ್ ಬಿಮಾ ವಿಮೆ ಬಿಡುಗಡೆ, ಬೆಳೆ ಹಾನಿ ಪರಿಹಾರ, ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಹವಾಮಾನ ವೈಪರೀತ್ಯ ಮಧ್ಯಂತರ ಪರಿಹಾರ ಹಣ ಬಿಡುಗಡೆಯಲ್ಲಿ ರೈತರಿಗೆ ಬಾರಿ ಅನ್ಯಾಯವೆಸಗಿದ್ದಾರೆ ಎಂದು ದೂರಿದರು.

    ರೈತ ಮುಖಂಡ ಎಸ್.ಆರ್. ಅಂಬಲಿ, ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ‘ರೈತಪರ ಹೋರಾಟಗಾರರು ಒಗ್ಗಟ್ಟು ಪ್ರದರ್ಶಿಸಬೇಕು. ವಿದ್ಯುತ್ ಖಾಸಗೀಕರಣ ವಿರೋಧಿಸಬೇಕು’ ಎಂದು ಆಗ್ರಹಿಸಿದರು. ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

    ರೈತರಿಂದ ತಹಸೀಲ್ದಾರ್ ಹುಲ್ಲೂರಗೆ ಮನವಿ

    ನೂರಾರು ರೈತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಬಸ್ ಸಂಚಾರಕ್ಕೆ ಬೇರೆ ಮಾರ್ಗದಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಪೊಲೀಸರು ಬಂದೋಬಸ್ತ್ ಒದಗಿಸಿದ್ದರು. ಸಿ.ಸಿ. ಮತ್ತು ಡ್ರೋನ್ ಕ್ಯಾಮರಾ ಬಳಸಿ ಎಲ್ಲಿಯೂ ಅವಘಡ ಸಂಭವಿಸದಂತೆ ಮುಂಜಾಗ್ರತೆ ವಹಿಸಿದ್ದರು. ತಹಸೀಲ್ದಾರ್ ನವೀನ ಹುಲ್ಲೂರ ರೈತರಿಂದ ಮನವಿ ಸ್ವೀಕರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts