ಬೆಳಗಾವಿ: ಅಪರಿಚಿತ ವಾಹನ ಡಿಕ್ಕಿಯಾಗಿ ವೃದ್ಧೆ ಸ್ಥಳದಲ್ಲೇ ಸಾವು

ಎಂ.ಕೆ.ಹುಬ್ಬಳ್ಳಿ: ಇಲ್ಲಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಬಳಿಯ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಮಂಗಳವಾರ ಮಧ್ಯಾಹ್ನ ಅಪರಿಚಿತ ವಾಹನ ಡಿಕ್ಕಿ ಹೊಡೆದು ವೃದ್ಧೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಳಗಾವಿ ನಗರದ ಅನಗೋಳ ನಿವಾಸಿ ಸುಶೀಲಾ ಗೋಪಾಲರಾವ್ ಕುಲಕರ್ಣಿ (65) ಮೃತ ವೃದ್ಧೆ. ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ತೆರಳಿ ಕಬ್ಬಿನ ಬಿಲ್ ಬಗ್ಗೆ ಮಾಹಿತಿ ಪಡೆದು ಮರಳಿ ಹೆದ್ದಾರಿ ದಾಟುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಕಿತ್ತೂರು ಉಪಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಕರಣ ದಾಖಲಾಗಿದೆ.