More

    ಜಾಲತಾಣದಲ್ಲಿ ಸುದ್ದಿಯ ಸತ್ಯಾಸತ್ಯತೆ ಪರಾಮರ್ಶೆಯಾಗಲಿ

    ಚಿಕ್ಕಮಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ ಸಂದೇಶಗಳು ಬಹುಬೇಗ ಪ್ರಚಾರ ಪಡೆಯುತ್ತಿದ್ದು, ಸದ್ವಿಚಾರಗಳು ಮೌಲ್ಯ ಕಳೆದುಕೊಳ್ಳುತ್ತಿವೆ ಎಂದು ವಿಧಾನಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಅಭಿಪ್ರಾಯಪಟ್ಟರು.

    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಸಾಮಾಜಿಕ ಜಾಲತಾಣ ಮತ್ತು ಮಾಹಿತಿ ತಂತ್ರಜ್ಞಾನ ಪ್ರಕೋಷ್ಠದ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

    ಜಾಲತಾಣಗಳು ಸರ್ಕಾರದ ಯೋಜನೆಗಳನ್ನು ಜನತೆಗೆ ತಲುಪಿಸಲು ಮುಖ್ಯ ಸಾಧನ. ಈ ಹಿಂದೆ ಅವುಗಳ ಬಳಕೆ ಕಡಿಮೆ ಇತ್ತು. ಆದರೆ ವಿಜ್ಞಾನ- ತಂತ್ರಜ್ಞಾನ ಬೆಳೆದಂತೆ ಸಾಮಾಜಿಕ ಮಾಧ್ಯಮಗಳು ಹೆಚ್ಚು ಪ್ರಚಲಿತಕ್ಕೆ ಬಂದಿದ್ದು, ಅವುಗಳು ಹರಡುವ ವಿಷಯಗಳ ಸತ್ಯಾಸತ್ಯತೆ ವಿಮಶಿಸುವ ಮನಸ್ಥಿತಿ ಬೆಳೆಸಿಕೊಳ್ಳಬೇಕು ಎಂದರು.

    ನಮ್ಮ ದಿನನಿತ್ಯದ ಚಟುವಟಿಕೆಗಳು ಆರಂಭಗೊಳ್ಳುವುದೇ ಮಾಹಿತಿ, ತಂತ್ರಜ್ಞಾನದಿಂದ. ಸಾಮಾಜಿಕ ಮಾಧ್ಯಮಗಳನ್ನು ಹೆಚ್ಚಾಗಿ ಯುವಜನತೆ ಬಳಸುತ್ತಿದ್ದು, ಸರಿಯಾಗಿ ಬಳಸಿಕೊಂಡಲ್ಲಿ ಮಾತ್ರ ಒಳಿತಾಗಲಿದೆ. ಸಾಮಾಜಿಕ ಮಾಧ್ಯಮಗಳಿಗೆ ಒಂದು ಸರ್ಕಾರವನ್ನು ಗೆಲ್ಲಿಸುವ, ಸೋಲಿಸುವ ಶಕ್ತಿ ಇದೆ ಎಂದು ಹೇಳಿದರು.

    ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣ ಮತ್ತು ಮಾಹಿತಿ ತಂತ್ರಜ್ಞಾನ ಪ್ರಕೋಷ್ಠವು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಡಳಿತ ಯೋಜನೆಗಳನ್ನು ಜನತೆಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜತೆಗೆ ಅಪಪ್ರಚಾರ ಮಾಡುವ ವಿರೋಧಿಗಳನ್ನು ಎಚ್ಚರಿಸುವ ಕೆಲಸ ಮಾಡುತ್ತಿದೆ. ಇತ್ತೀಚೆಗೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಆದರೆ ಇದಕ್ಕೆ ಕಾರಣಗಳೇನು ಎಂಬುದರ ಕುರಿತು ಜನತೆಗೆ ಅರಿವು ಮೂಡಿಸಬೇಕಿದೆ ಎಂದರು.

    ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ ಮಾತನಾಡಿ, ಸಾಮಾಜಿಕ ಮಾಧ್ಯಮಗಳಲ್ಲಿ ಕೆಟ್ಟ ಸಂಗತಿಗಳು ಬೇಗ ಹರಿದಾಡುತ್ತವೆ. ಹಾಗಾಗಿ ಒಳ್ಳೆಯ ವಿಚಾರಗಳನ್ನು ಜನತೆಗೆ ಬಲವಂತವಾಗಿ ತುಂಬಬೇಕಿದೆ. ಸಾಮಾಜಿಕ ಮಾಧ್ಯಮಗಳ ಜವಾಬ್ದಾರಿ ಹೆಚ್ಚಿದ್ದು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು ಎಂದು ತಿಳಿಸಿದರು.

    ಸಾಮಾಜಿಕ ಜಾಲತಾಣದ ರಾಜ್ಯ ಸಹ ಸಂಚಾಲಕ ಪ್ರಶಾಂತ್ ಜಾಧವ್, ಜಿಲ್ಲಾ ಉಪಾಧ್ಯಕ್ಷ ಪ್ರೇಮ್ುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಆರ್.ದೇವರಾಜ್ ಶೆಟ್ಟಿ, ಜಿಲ್ಲಾ ಸೋಷಿಯಲ್ ಮೀಡಿಯಾ ಸಂಚಾಲಕ ಚೇತನ್ ಶೆಟ್ಟಿ, ಸಹ ಸಂಚಾಲಕ ಸಮೃದ್ಧ್ ಪೈ, ಜಿಲ್ಲಾ ವಕ್ತಾರ ವರಸಿದ್ಧಿ ವೇಣುಗೋಪಾಲ್, ಮಾಧ್ಯಮ ವಕ್ತಾರ ಸುಧಿರ್, ಮುಖಂಡ ಬಿ.ರಾಜಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts