More

    ಮಳೆ ಹಾನಿ ಪ್ರದೇಶಗಳಿಗೆ ಶಾಸಕಿ ಭೇಟಿ:ಸರ್ಕಾರಕ್ಕೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಅನಿತಾ ಕುಮಾರಸ್ವಾಮಿ ಸೂಚನೆ

    ರಾಮನಗರ:  ತಾಲೂಕಿನಲ್ಲಿ ಆದ ಅಕಾಲಿಕ ಮಳೆಯಿಂದ ಹಾನಿಗೊಳಗಾದ ರೈತರ ರಾಗಿ ಹೊಲಗಳಿಗೆ ಹಾಗೂ ಮನೆ ಕುಸಿದು ಬಿದ್ದಿರುವ ಪ್ರದೇಶಗಳಿಗೆ ಶಾಸಕಿ ಅನಿತಾ ಕುಮಾರಸ್ವಾಮಿ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ವಿಭೂತಿಕೆರೆ, ಅಂಜನಾಪುರ, ಬನ್ನಿಕುಪ್ಪೆ, ತೆಂಗಿನಕಲ್ಲು, ಕೈಲಾಂಚ, ರೇವಣಸಿದ್ದೇಶ್ವರ ಬೆಟ್ಟ ಸೇರಿ ಕಸಬಾ ಹೋಬಳಿಯ ಬಿಳಗುಂಬ, ಹಳ್ಳಿಮಾಳ, ಅರ್ಚಕರಹಳ್ಳಿ ಮತ್ತಿತರ ಗ್ರಾಮಗಳಿಗೆ ಬುಧವಾರ ಭೇಟಿ ನೀಡಿದ್ದ ಅವರು ರೈತರ ಜತೆ ಚರ್ಚಿಸಿದರು.

    ಕೊಯ್ಲಿಗೆ ಬಂದಿದ್ದ ರಾಗಿ ಹಾಳಾಗಿರುವುದನ್ನು ರೈತರು ತೋರಿಸಿದ್ದಾರೆ. ಜಾನುವಾರುಗಳ ವೇವಿಗೂ ತೊಂದರೆಯಾಗಿದೆ. ಈಗಾಗಲೇ ಕೃಷಿ, ಕಂದಾಯ, ತೋಟಗಾರಿಕೆ ಇಲಾಖೆ ಅಧಿಕಾರಿಗಳ ಜತೆ ಮಾತನಾಡಿದ್ದೇನೆ.
    ಬೆಳೆಹಾನಿಯ ಸಮೀಕ್ಷೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಿದ್ದೇನೆ. ಮನೆ ಕಳೆದುಕೊಂಡಿರುವವರ ಪಟ್ಟಿ ಸಿದ್ಧಪಡಿಸಿ, ಅವರಿಗೆ ಅಗತ್ಯ ನೆರವು ನೀಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಶಾಸಕರು ಹೇಳಿದರು.

    ಜೆಡಿಎಸ್ ತಾಲೂಕು ಅಧ್ಯಕ್ಷ ರಾಜಶೇಖರ್, ಪ್ರಧಾನಕಾರ್ಯದರ್ಶಿ ಬಿ. ಉಮೇಶ್, ಪ್ರಚಾರ ಸಮಿತಿ ಅಧ್ಯಕ್ಷ ಆರ್. ಪಾಂಡುರಂಗ, ವಿಭೂತಿಕೆರೆ ಗ್ರಾಪಂ ಅಧ್ಯಕ್ಷೆ ಮಂಗಳಗೌರಮ್ಮ, ಬನ್ನಿಕುಪ್ಪೆ ಗ್ರಾಪಂ ಅಧ್ಯಕ್ಷೆ ರಾಜಮ್ಮ, ಉಪಾಧ್ಯಕ್ಷ ಚಂದ್ರಗಿರಿ, ಗ್ರಾಪಂ ಸದಸ್ಯರಾದ ಚಲುವರಾಜು, ಸುನಿತಾ, ಬಿಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಪಿ. ಅಶ್ವತ್ಥ್, ಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸ್ವಾಮಿ, ಮುಖಂಡರಾದ ರೇವಣ್ಣ, ನಾಗರಾಜು, ಗಿರಿಯಪ್ಪ, ಎಚ್.ಎಸ್. ದೇವರಾಜು ಮತ್ತಿತರರಿದ್ದರು.

     

    ಆನೆ ದಾಳಿ ತಪ್ಪಿಸಲು ಮನವಿ :  ವಿಭೂತಿಕೆರೆ ಗ್ರಾಪಂ ವ್ಯಾಪ್ತಿಯ ಅಂಜನಾಪುರ, ಚನ್ನಮಾನಹಳ್ಳಿ, ಚಿಕ್ಕೇನಹಳ್ಳಿ, ದೇವರದೊಡ್ಡಿ ಭಾಗಗಳಲ್ಲಿ 20 ದಿನಗಳಿಂದ ಆನೆಗಳ ಕಾಟ ವಿಪರೀತವಾಗಿದೆ. ಹೊಲ, ಗದ್ದೆಗಳಿಗೆ ನುಗ್ಗಿ ಸಲು ಹಾಳು ಮಾಡುತ್ತಿವೆ. ಅರಣ್ಯ ಇಲಾಖೆಯಿಂದ ವೈಜ್ಞಾನಿಕವಾಗಿ ಪರಿಹಾರ ಸಿಗುತ್ತಿಲ್ಲ. ಆನೆಗಳ ದಾಳಿಯಿಂದ ಆಗಿರುವ ಬೆಳೆನಷ್ಟಕ್ಕೆ ವೈಜ್ಞಾನಿಕವಾಗಿ ಪರಿಹಾರ ನೀಡುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸುವಂತೆ ಅನಿತಾ ಕುಮಾರಸ್ವಾಮಿ ಅವರಿಗೆ ರೈತರು ಮನವಿ ಮಾಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕಿ, ದೂರವಾಣಿ ಮೂಲಕ ಅಧಿಕಾರಿಗಳನ್ನು ಸಂಪರ್ಕಿಸಿ, ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಆಗಿರುವ ಬೆಳೆನಷ್ಟಕ್ಕೆ ವೈಜ್ಞಾನಿಕವಾಗಿ ಪರಿಹಾರ ನೀಡುವಂತೆ ಸೂಚಿಸಿದರು.

     

    ಅಕಾಲಿಕ ಮಳೆಯಿಂದ ಆಗಿರುವ ಬೆಳೆಹಾನಿಗೆ ಪರಿಹಾರ ಕೊಡುವುದಾಗಿ ಸರ್ಕಾರ ಭರವಸೆ ನೀಡಿದೆ. ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರವನ್ನು ಒತ್ತಾಯಿಸುತ್ತೇನೆ. ಕಂದಾಯ ಇಲಾಖೆಗೆ ಸಮರ್ಪಕ ಮಾಹಿತಿ ನೀಡಿ ರೈತರು ಸಹಕರಿಸಬೇಕು.
    ಅನಿತಾ ಕುಮಾರಸ್ವಾಮಿ ಶಾಸಕಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts