More

    ಶಾಸಕ ಎ.ಎಸ್.ಪೊನ್ನಣ್ಣ ಭೇಟಿಯಾದ ಅಕಾಡೆಮಿ ಅಧ್ಯಕ್ಷರು, ಸದಸ್ಯರು

    ಮಡಿಕೇರಿ: ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹಾಗೂ ಸದಸ್ಯರಾದ ಚಂದ್ರಶೇಖರ ಪೆರಾಲು, ತೇಜಕುಮಾರ್ ಕುಡೆಕಲ್, ಚಂದ್ರಾವತಿ ಬಡ್ಡಡ್ಕ, ಲತಾ ಕುದ್ಪಾಜೆ, ಪಿ.ಎಸ್.ಕಾರ್ಯಪ್ಪ, ಡಾ.ಎನ್.ಎ.ಜ್ಞಾನೇಶ್ ಅವರು ಬೆಂಗಳೂರಿನಲ್ಲಿ ಇತ್ತೀಚೆಗೆ ಭೇಟಿ ಮಾಡಿ ಪುಷ್ಪಗುಚ್ಛ ನೀಡಿದರು.


    ಎ.ಎಸ್.ಪೊನ್ನಣ್ಣ ಅವರು ಎರಡು ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರನ್ನು ಅಭಿನಂದಿಸಿದರು. ಕೊಡಗು ಜಿಲ್ಲೆಯಲ್ಲಿ ಎರಡು ಅಕಾಡೆಮಿಗಳನ್ನು ಉತ್ತುಂಗಕ್ಕೆ ಕೊಂಡೊಯ್ಯುವಲ್ಲಿ ಶ್ರಮಿಸುವಂತೆ ಪೊನ್ನಣ್ಣ ಅವರು ಸಲಹೆ ಮಾಡಿದರು.


    ಕೊಡವ ಮತ್ತು ಅರೆಭಾಷೆಗಳಿಗೆ ತನ್ನದೇ ಆದ ಇತಿಹಾಸ ಮತ್ತು ವೈವಿಶಿಷ್ಟತೆ ಇದ್ದು, ಕೊಡವ ಮತ್ತು ಅರೆಭಾಷೆ ಬೆಳವಣಿಗೆಗೆ ಹೆಚ್ಚಿನ ಪರಿಶ್ರಮ ಅಗತ್ಯ. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕಾರ್ಯ ಪ್ರವೃತ್ತರಾಗುವಂತೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಸಲಹೆ ನೀಡಿದರು.

    See also  ಕಳಸ ತಾಲೂಕು ಮೂಲ ಸೌಲಭ್ಯ ವಂಚಿತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts