ಪ್ರಕರಣಗಳ ಸೂಕ್ತ ವಿಚಾರಣೆ ನಡೆಸಲು ಶಾಸಕ ಅಬ್ಬಯ್ಯ ಸೂಚನೆ

blank

ಹುಬ್ಬಳ್ಳಿ : ಅವಳಿ ನಗರದ ಪೊಲೀಸ್ ಕಮಿಷನರೇಟ್ ಮತ್ತು ಧಾರವಾಡ ಜಿಲ್ಲೆಯಾದ್ಯಂತ ಯಾವುದೇ ಠಾಣೆಯಲ್ಲಿ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಾವುದೇ ದೂರು ಬಂದರೂ ತುರ್ತಾಗಿ ಸ್ಪಂಧಿಸಿ ಪ್ರಕರಣದ ಸೂಕ್ತ ವಿಚಾರಣೆ ಕೈಗೊಳ್ಳಬೇಕು ಎಂದು ಶಾಸಕ ಪ್ರಸಾದ ಅಬ್ಬಯ್ಯ ಸೂಚಿಸಿದ್ದಾರೆ.

ಈ ಕುರಿತು ನಿರ್ಲಕ್ಷ್ಯ ತೋರುವ ಅಧಿಕಾರಿಗಳು ಅಥವಾ ಸಿಬ್ಬಂದಿಯ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಶಾಸಕ ಅಬ್ಬಯ್ಯ, ಅವಳಿನಗರದಲ್ಲಿ ಅಪರಾಧ ಪ್ರಕಣಗಳ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಸದಾ ಸನ್ನದ್ಧವಾಗಿರಬೇಕು ಎಂದು ತಿಳಿಸಿದ್ದಾರೆ.

ಯಾವುದೇ ಪೊಲೀಸ್ ಠಾಣೆಯಲ್ಲಿ ವಿಶೇಷವಾಗಿ ಮಹಿಳೆಯರು, ಯುವತಿಯರು ಮತ್ತು ವಿದ್ಯಾರ್ಥಿನಿಯರಿಂದ ದೂರುಗಳು ಬಂದರೆ ತಕ್ಷಣವೇ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸಿ ಮುಂದೆ ಆಗಬಹುದಾದ ದುರ್ಘಟನೆಗಳನ್ನು ತಡೆಯಬೇಕು. ಇಲ್ಲವಾದಲ್ಲಿ ತಪ್ಪಿತಸ್ಥ ಅಧಿಕಾರಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಡ್ರಗ್ ಪೆಡಲರ್​ಗಳ ಹೆಡೆಮುರಿ ಕಟ್ಟಿ :

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಗಾಂಜಾ, ಅಫೀಮು, ಮಾದಕ ವಸ್ತುಗಳ ಮಾರಾಟ ಮತ್ತು ಇದರ ಜಾಲವನ್ನು ಬೇಧಿಸಿ ಅವಳಿ ನಗರವನ್ನು ಮಾದಕ ವಸ್ತುಗಳ ಮುಕ್ತ ಮಾಡಲು ಪೊಲೀಸ್ ಇಲಾಖೆ ಕೂಡಲೇ ಕಾರ್ಯ ಪ್ರವೃತ್ತರಾಗಿ ದಿನದ 24 ಗಂಟೆಗಳ ಕಾಲ ಅದರ ಮೇಲೆ ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.

ಡ್ರಗ್ ಪೆಡಲರ್​ಗಳನ್ನು ಪತ್ತೆಹಚ್ಚಿ ಹೆಡೆಮುರಿಕಟ್ಟಿ ಕ್ರಮ ಕೈಗೊಂಡು, ಡ್ರಗ್ ದಂಧೆಯನ್ನು ಬುಡಸಮೇತ ಕಿತ್ತೆಸೆಯಲು ಇಲಾಖೆ ಸಮರೋಪಾದಿಯಲ್ಲಿ ಕಾರ್ಯಕೖಗೊಳ್ಳಬೇಕೆಂದು ಹೇಳಿದ್ದಾರೆ. ಅಪರಾಧ ಪ್ರಕರಣ ತಡೆಯುವಲ್ಲಿ ಸಾರ್ವಜನಿಕರ ಸಹಕಾರವೂ ಅಗತ್ಯ. ತಮ್ಮ ಸುತ್ತ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ಜಾಗೃತರಾಗಿ, ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಸಾರ್ವಜನಿಕರ ಮಾಹಿತಿಯಿಂದ ಇನ್ನೂ ಬೇಗ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯಲು ಸಾಧ್ಯ. ಸಾರ್ವಜನಿಕರು ಯಾರಿಗೂ ಭಯಪಡದೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಶಾಸಕ ಪ್ರಸಾದ ಅಬ್ಬಯ್ಯ ಮನವಿ ಮಾಡಿದ್ದಾರೆ.

Share This Article

ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels

Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…

ಜಗತ್ತಿನ ಈ 5 ಜನರ ಮುಂದೆ ಯಾವಾಗಲೂ ಮೌನವಾಗಿರಬೇಕಂತೆ! ಚಾಣಕ್ಯ ನೀತಿ ಬಗ್ಗೆ ತಿಳಿಯಿರಿ | Chanakya Niti

Chanakya Niti : ಚಾಣಕ್ಯ ಎಂದ ಕ್ಷಣ ಕಣ್ಣ ಮುಂದೆ ಬರುವುದೆ ಚಾಣಕ್ಷ್ಯತನ, ಬುದ್ಧಿವಂತಿಕೆ. ಹಾಗಾಗಿ,…