ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು: ಪ್ರಾಣಾಪಾಯದಿಂದ ಪಾರು!

ca
Published on

ಯಾದಗಿರಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆಂದು ತೆರಳಿದ್ದ ಬೆಂಗಳೂರಿನ ಕೆ.ಆರ್. ಪುರ ಕ್ಷೇತ್ರದ ಶಾಸಕ ಬೈರತಿ ಬಸವರಾಜ್ ಅವರ ಫಾರ್ಚೂನರ್ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೂಗೌಡ ಪರವಾಗಿ ಪ್ರಚಾರಕ್ಕೆ ತೆರಳಿದ್ದ ಶಾಸಕ ಬೈರತಿ ಬಸವರಾಜ್ ಕಾರು ಅಪಘಾಕ್ಕೊಳಗಾದ ಘಟನೆ ಸೋಮವಾರ ಸಂಜೆ ನಡೆದಿದೆ. ಕಾರಿನಲ್ಲಿದ್ದ ಚಾಲಕ ಹಾಗೂ ಗನ್ ಮ್ಯಾನ್​ ಅದೃಷ್ಟವಶಾತ್​ ಪ್ರಣಾಪಾಯದಿಂದ ಪಾರಾಗಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ಬಿಜೆಪಿ ಅಭ್ಯರ್ಥಿ ರಾಜುಗೌಡ ಪರ ಮತಯಾಚನೆಗೆ ಆಗಮಿಸಿದ ವೇಳೆ ಘಟ‌ನೆ ಸಂಭವಿಸಿದೆ. ಆದರೆ, ಅದೃಷ್ಟವಶಾತ್ ಶಾಸಕ ಬೈರತಿ ಬಸವರಾಜು ಅವರು ಬೇರೆ ಕಾರಿನಲ್ಲಿ ತೆರಳಿದ್ದರಿಂದ ಅವರಿಗೆ ಯಾವುದೇ ಪ್ರಾಣಾಪಾಯ ಅಥವಾ ಗಾಯವಾಗಲೀ ಸಂಭವಿಸಿಲ್ಲ.

ಇನ್ನು ಘಟನೆ ನಡೆದ ಸ್ಥಳಕ್ಕೆ ಹುಣಸಗಿ ಪೊಲೀಸ್ ಠಾಣೆಯ ಪಿಎಸ್‌ಐ ಸಂಗೀತಾ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕಾರನ್ನು ಕ್ರೇನ್‌ ಸಹಾಯದಿಂದ ಮೇಲಕ್ಕೆತ್ತಿಸಿ, ತೆಗೆದುಕೊಂಡು ಹೋಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net