More

    ನೀರಿನ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳಿ

    ಕೆಂಭಾವಿ: ಪಟ್ಟಣದಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು ಮತ್ತು ಅರ್ಧಕ್ಕೆ ನಿಂತಿರುವ ಸಿಳಕಮಟ್ಟಿ ಹಳ್ಳದ ಪೈಪ್ಲೈನ್ ಕಾಮಗಾರಿ ಪೂರ್ಣಗೊಳಿಸುವಂತೆ ಶಾಸಕ ಶರಣಬಸಪ್ಪ ದರ್ಶನಾಪುರ ಮುಖ್ಯಾಧಿಕಾರಿಗೆ ಸೂಚಿಸಿದರು.

    ಕರೊನಾ ತಡೆಗೆ ಮುಂಜಾಗ್ರತಾ ಕ್ರಮ ಹಾಗೂ ಕುಡಿಯುವ ನೀರಿನ ಸಮಸ್ಯೆ ಕುರಿತು ಪುರಸಭೆ ಕಚೇರಿಯಲ್ಲಿ ಸೋಮವಾರ ಮುಖ್ಯಾಧಿಕಾರಿ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಪಂ ಪಿಡಿಒಗಳ ಸಭೆಯಲ್ಲಿ ಮಾತನಾಡಿದ ಅವರು, ಕಸ ವಿಲೇವಾರಿಗೆ ಫತ್ತೇಪುರ ಹತ್ತಿರ 10 ಎಕರೆ ಜಮೀನು ಮಂಜೂರಾಗಿದ್ದು, ಕೂಡಲೇ ಪುರಸಭೆ ಸುಪರ್ದಿಗೆ ತೆಗೆದುಕೊಂಡು ಕಸ ವಿಲೆವಾರಿ ಮಾಡುವಂತೆ ಆದೇಶಿಸಿದರು.

    ಬೇಸಿಗೆ ವೇಳೆ ಯಕ್ತಾಪುರ ಗ್ರಾಪಂ ವ್ಯಾಪ್ತಿಯ ಕೆಲ ಗ್ರಾಮಗಳಲ್ಲಿ ಎದುರಾಗುವ ಕುಡಿಯುವ ನೀರಿನ ತೊಂದರೆ ಪರಿಹರಿಸಲು ತಾಪಂ ಇಒಗೆ ಸೂಚನೆ ನೀಡಿದ ಶಾಸಕರು, ಹೆಗ್ಗನದೊಡ್ಡಿ ಸೇರಿ ಕ್ಷೇತ್ರದ ಹಲವು ಗ್ರಾಮಗಳಲ್ಲಿ ನೀರಿದ್ದರೂ ವಿದ್ಯುತ್ ಸಮಸ್ಯೆ ಎದ್ದು ಕಾಣುತ್ತಿದೆ. ಕೂಡಲೇ ನಿಯಮಿತ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಜೆಸ್ಕಾಂ ಎಇಇ ಹಾಗೂ ವಲಯಾಧಿಕಾರಿಗೆ ದೂರವಾಣಿ ಮೂಲಕ ಸೂಚಿಸಿದರು.

    ತಹಸೀಲ್ದಾರ್ ನಿಂಗಣ್ಣ ಬಿರಾದಾರ, ತಾಪಂ ಇಒ ಅಂಬರೀಶ, ಮುಖ್ಯಾಧಿಕಾರಿ ದೇವೇಂದ್ರಪ್ಪ ಹೆಗಡೆ, ಪಿಎಸ್ಐ ಸುದರ್ಶನರಡ್ಡಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಜೆಇ ಸ್ಫೂರ್ತಿ, ಆಹಾರ ನಿರೀಕ್ಷಕ ಅಪ್ಪಯ್ಯ ಹಿರೇಮಠ, ಸಮುದಾಯ ಆರೋಗ್ಯ ಕೇಂದ್ರದ ಆಯುಷ್ ವೈದ್ಯಾಧಿಕಾರಿ ಡಾ.ಸಿದ್ದು ನ್ಯಾಮಗೊಂಡ, ಕಂದಾಯ ನಿರೀಕ್ಷಕ ರಾಜೇಸಾಬ ಕಂದಗಲ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts