ಮಡಿವಾಳ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿ

ತರೀಕೆರೆ: ವಚನಗಳ ಮೂಲಕ ನಮ್ಮ ಜೀವನದ ಅಂಕá–ಡೊಂಕು ತಿದ್ದಿದ ದಾರ್ಶನಿಕರನ್ನು ಸ್ಮರಿಸುವ ಜತೆಗೆ ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಡಿ.ಎಸ್.ಸುರೇಶ್ ಹೇಳಿದರು.

ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತ, ತಾಪಂ, ಪುರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಮಡಿವಾಳ ಸಮುದಾಯ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿಯೂ ಅತ್ಯಂತ ಹಿಂದುಳಿದಿದೆ. ಸರ್ಕಾರ ಮಡಿವಾಳ ಸಮಾಜದ ಅಭಿವೃದ್ಧಿಗೆ ನಿಗಮ ಸ್ಥಾಪಿಸಿ ವಿಶೇಷ ಯೋಜನೆಗಳನ್ನು ಅನುಷ್ಟಾನಗೊಳಿಸಬೇಕು. ಸಮಾಜದ ಬಂಧುಗಳು ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಲು ಸಂಘಟನೆ ಬಲಗೊಳಿಸಬೇಕು ಎಂದರು.