ರಾಜ್ಯ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ

ತರೀಕೆರೆ: ಮೈತ್ರಿ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದರೂ ಹೋರಾಟದ ಮೂಲಕ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗೆ ಯತ್ನಿಸಲಾಗುತ್ತಿದೆ ಎಂದು ಶಾಸಕ ಡಿ.ಎಸ್.ಸುರೇಶ್ ಹೇಳಿದರು.

ಬೇಲೇನಹಳ್ಳಿಯ ಎ.ಕೆ.ಕಾಲನಿ ಹಾಗೂ ಹಿರೇಕಾತೂರು ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಮಾತನಾಡಿ, ಹಿಂದಿನ ಶಾಸಕರು ಕ್ಷೇತ್ರಕ್ಕೆ 2,500 ಕೋಟಿ ರೂ. ಅನುದಾನ ತಂದು ಸಮಗ್ರ ಅಭಿವೃದ್ಧಿ ಮಾಡಲಾಗಿದೆ ಎಂದು ಹೇಳಿ ಜನರನ್ನು ವಂಚಿಸಿದ್ದಾರೆ ಎಂದು ಆರೋಪಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಮೂಲಕ 9 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ರೂಪು ರೇಷೆ ತಯಾರಿಸಲಾಗಿದೆ. ಬೇಲೇನಹಳ್ಳಿ ಗ್ರಾಪಂ ವ್ಯಾಪ್ತಿಗೊಳಪಡುವ ಹಲವು ಕೆರೆಗಳಿಗೆ ಅಮೃತಾಪುರ ಏತ ನೀರಾವರಿ ಯೋಜನೆ ಮೂಲಕ ನೀರು ತುಂಬಿಸುವ 2.85 ಕೋಟಿ ರೂ. ಕಾಮಗಾರಿ ಟೆಂಡರ್ ಹಂತದಲ್ಲಿದೆ ಎಂದು ಮಾಹಿತಿ ನೀಡಿದರು.