ಮಂಡ್ಯ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ ಎಂದು ಮಾಜಿ ಐಆರ್‌ಎಸ್ ಅಧಿಕಾರಿ ಲಕ್ಷ್ಮೀಅಶ್ವಿನ್‌ಗೌಡ ಹೇಳಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಒಂದು ಪಕ್ಷದ ಪರ ಗುರುತಿಸಿಕೊಂಡಿದ್ದೆ. ಆದರೆ, ಸ್ಪರ್ಧಿಸಲು ಅವಕಾಶ ನೀಡಲಿಲ್ಲ. ಪಕ್ಷದ ವರಿಷ್ಠರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದರೆ ಸ್ಪರ್ಧೆ ಮಾಡುತ್ತೇನೆ. ಇಲ್ಲವಾದಲ್ಲಿ ಸಾಮಾನ್ಯ ಕಾರ್ಯಕರ್ತಳಾಗಿ ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಪಪಡಿಸಿದರು.
ಇನ್ನು ತಮ್ಮ ಅಂಜನಿ ಫೌಂಡೇಷನ್ ಸಹಯೋಗದಲ್ಲಿ ಆ.29ರಂದು ಮಂಡ್ಯ ನಗರದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ 140 ಕಂಪನಿಗಳು ಭಾಗವಹಿಸಲಿದ್ದು, ಸುಮಾರು 5 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ. ಇದಲ್ಲದೆ ಯುವಕರಿಗೆ ಮತ್ತು ಯುವತಿಯರಿಗೆ ಸ್ವ ಉದ್ಯೋಗ ತರಬೇತಿ ನೀಡಿ ಸ್ವಾವಲಂಬಿ ಜೀವನ ನಡೆಸಲು ಆದ್ಯತೆ ನೀಡಲಾಗುವುದು ಎಂದು ವಿವರಿಸಿದರು.
ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮಾಜಿ ಐಆರ್‌ಎಸ್ ಅಧಿಕಾರಿ ನಿಲುವಿದು…!
You Might Also Like
ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…
ಬೆಂಗಳೂರು: ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…
ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower
ಬೆಂಗಳೂರು: ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…
ನೀವಿದನ್ನು ನಿತ್ಯವೂ ಚಾಚೂ ತಪ್ಪದೇ ಅನುಸರಿಸಿದರೆ ನೀವು ಖಂಡಿತ ಶ್ರೀಮಂತರಾಗ್ತೀರಿ! Rich Person
ಇಂದು ಪ್ರತಿಯೊಬ್ಬರು ಶ್ರೀಮಂತರಾಗಲು ( Rich Person ) ಬಯಸುತ್ತಾರೆ. ತಾವು ದುಡಿದ ಹಣವನ್ನು ಸರಿಯಾದ…