More

  ಶಾಸಕ ಜಿ.ಸೋಮಶೇಖರರೆಡ್ಡಿ ಬಂಧನಕ್ಕೆ ಕಾಂಗ್ರೆಸ್ ಮುಖಂಡರ ಒತ್ತಾಯ

  ಬಳ್ಳಾರಿ: ಪ್ರಚೋದನಕಾರಿ ಭಾಷಣ ಮಾಡಿದ ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಜಿಲ್ಲಾ ಮುಖಂಡರು ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹಾಗೂ ಎಸ್ಪಿ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾಗೆ ಸೋಮವಾರ ಮನವಿ ಸಲ್ಲಿಸಿದರು.

  ಬಳ್ಳಾರಿಯಲ್ಲಿ ಹಿಂದು ಮುಸ್ಲಿಮರು ಸಹೋದರರಂತೆ ಇದ್ದು, ರೆಡ್ಡಿ ಪ್ರಚೋದನಕಾರಿ ಹೇಳಿಕೆ ನೀಡಿ ಕಿಡಿ ಹೊತ್ತಿಸಿದ್ದಾರೆ. ಇದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದ್ದು, ಕೂಡಲೇ ಸೋಮಶೇಖರ ರೆಡ್ಡಿ ಅವರನ್ನು ಬಂಧಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ವಿಪ ಸದಸ್ಯ ಕೆ.ಸಿ. ಕೊಂಡಯ್ಯ ನೇತೃತ್ವ ವಹಿಸಿದ್ದರು. ರಾಜ್ಯಸಭಾ ಸದಸ್ಯ ಸಯ್ಯದ್ ನಾಸೀರ್ ಹುಸೇನ್, ವಿಪ ಸದಸ್ಯ ಅಲ್ಲಂ ವೀರಭದ್ರಪ್ಪ, ಮುಖಂಡರಾದ ಆಂಜನೇಯಲು, ವೆಂಕಟೇಶ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಸಿನಿಮಾ

  Latest Posts