More

    ಡಯಾಲಿಸಿಸ್ ಘಟಕಕ್ಕೆ ಹೆಚ್ಚುವರಿ ಯಂತ್ರ ಅಳವಡಿಕೆ

    ಸಾಗರ: ಉಪವಿಭಾಗೀಯ ಆಸ್ಪತ್ರೆ ಮತ್ತು ತಾಯಿಮಗು ಆಸ್ಪತ್ರೆ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುತ್ತಿದೆ. ಉತ್ತಮ ಆರೋಗ್ಯ ಸೇವೆ ಸಿಗುತ್ತಿರುವುದರಿಂದ ಅಕ್ಕಪಕ್ಕದ ಜಿಲ್ಲೆಗಳಿಂದಲೂ ನಮ್ಮ ಆಸ್ಪತ್ರೆಗೆ ರೋಗಿಗಳು ಚಿಕಿತ್ಸೆಗೆ ಬರುತ್ತಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು
    ಸಾಗರ ಉಪವಿಭಾಗೀಯ ಆಸ್ಪತ್ರೆ ಆವರಣದಲ್ಲಿ ಶನಿವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 1.42 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
    ಆಸ್ಪತ್ರೆಗೆ ಬೇಕಾದ ಮೂಲ ಸೌಲಭ್ಯ ಕಲ್ಪಿಸುವುದು ನಮ್ಮ ಜವಾಬ್ದಾರಿ. ಹೆಚ್ಚುವರಿಯಾಗಿ ಫಿಜಿಯೋಥೆರಫಿ ಯಂತ್ರ ಅಳವಡಿಕೆ, ಡಯಾಲಿಸಿಸ್ ಘಟಕಕ್ಕೆ ಹೆಚ್ಚುವರಿ ಯಂತ್ರ ಅಳವಡಿಸಲು ಬೇಕಾದ ಕ್ರಮ ತೆಗೆದುಕೊಳ್ಳಲಾಗಿದೆ. ಫಿಜಿಯೋಥೆರಫಿಗೆ ಆರು ಹೆಚ್ಚುವರಿ ಯಂತ್ರ ಬಂದಿದ್ದು ಇನ್ನೂ ನಾಲ್ಕಕ್ಕೆ ಬೇಡಿಕೆ ಸಲ್ಲಿಸಲಾಗಿದೆ ಎಂದರು.
    ರಾಜ್ಯ ಸರ್ಕಾರ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಹೃದಯ ಜ್ಯೋತಿ ಯೋಜನೆ ಜಾರಿಗೆ ತಂದಿದೆ. ಹೃದಯ ಸಂಬಂಧಿ ಕಾಯಿಲೆಯನ್ನು ನಿಯಂತ್ರಿಸುವ ಪ್ರಮುಖ ಉದ್ದೇಶ ರಾಜ್ಯ ಸರ್ಕಾರದ್ದಾಗಿದೆ. ಸಾಗರ ಆಸ್ಪತ್ರೆಯಲ್ಲಿ ಸಹ ಇದು ಜಾರಿಗೆ ಬಂದಿದೆ. ಶಿವಮೊಗ್ಗದಲ್ಲಿ ಕಿದ್ವಾಯಿ ಮಾದರಿ ಆಸ್ಪತ್ರೆ ಸ್ಥಾಪನೆಗೆ ಸರ್ಕಾರ 50 ಕೋಟಿ ರೂ. ಮಂಜೂರು ಮಾಡಿದೆ. ಒಟ್ಟಾರೆ ಜನರಿಗೆ ಉತ್ತಮ ಆರೋಗ್ಯ ಸೇವೆ ಸಿಗಬೇಕು ಎನ್ನುವುದು ನಮ್ಮ ಉದ್ದೇಶ ಎಂದರು.
    ಪೌರಾಯುಕ್ತ ಎಚ್.ಕೆ.ನಾಗಪ್ಪ ಮಾತನಾಡಿ, 1.40 ಕೋಟಿ ರೂ. ವೆಚ್ಚದಲ್ಲಿ ರೋಗಿಗಳು ಮತ್ತು ಅವರ ಸಹಾಯಕರಿಗೆ ಬೇಕಾದ ಸೌಲಭ್ಯ ಕಲ್ಪಿಸುವ ವಿವಿಧ ಕಾಮಗಾರಿಗಳಿಗೆ ಶಾಸಕರು ಚಾಲನೆ ನೀಡಿದ್ದಾರೆ. ಉಪವಿಭಾಗೀಯ ಆಸ್ಪತ್ರೆ ಮತ್ತು ತಾಯಿಮಗು ಆಸ್ಪತ್ರೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸರ್ಕಾರದಿಂದ ಶಾಸಕರು ಮಂಜೂರು ಮಾಡಿಸಿದ್ದಾರೆ. ಜತೆಗೆ ಸ್ವಚ್ಛತೆ, ಉದ್ಯಾನ ನಿರ್ಮಾಣಕ್ಕೂ ಒತ್ತು ನೀಡಲಾಗಿದೆ ಎಂದು ಹೇಳಿದರು.
    ಸಿವಿಲ್ ಸರ್ಜನ್ ಡಾ. ಪರಪ್ಪ , ಡಾ. ಬಿ.ಜಿ.ಸಂಗಮ್, ಡಾ. ಪ್ರತಿಮಾ, ಪ್ರಮುಖರಾದ ಚಂದ್ರಪ್ಪ, ಭಾವನಾ ಸಂತೋಷ್, ಲಲಿತಮ್ಮ, ಮಧುಮಾಲತಿ, ಗಣಪತಿ ಮಂಡಗಳಲೆ, ಉಮೇಶ್, ವಿ.ಶಂಕರ್, ಸರಸ್ವತಿ ನಾಗರಾಜ್, ಅಬ್ದುಲ್ ಹಮೀದ್, ಜಯರಾಮ್, ಅಶೋಕ್ ಬೇಳೂರು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts