More

    ಗಣಿ ಮಾಲೀಕರಿಗೆ ನೋಟಿಸ್ ಕೊಡಿ ; ಹಾಳಾದ ರಸ್ತೆ ಸರಿಪಡಿಸಲು ಸೂಚಿಸುವಂತೆ ಅಧಿಕಾರಿಗಳಿಗೆ ಶಾಸಕ ಗೌರಿಶಂಕರ್ ತಾಕೀತು

    ತುಮಕೂರು: ಕ್ರಷರ್‌ಗಳಿಂದ ಜಲ್ಲಿ, ಎಂ-ಸ್ಯಾಂಡ್ ತುಂಬಿಕೊಂಡು ಓಡಾಡುವ ಲಾರಿಗಳಿಂದ ಗ್ರಾಮಾಂತರ ಕ್ಷೇತ್ರದ ರಸ್ತೆಗಳು ಹಾಳಾಗಿದ್ದು ಈ ರಸ್ತೆಗಳನ್ನು ನಿರ್ಮಿಸಿಕೊಡುವಂತೆ ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿ ಎಂದು ಪಿಡಬ್ಲೂೃಡಿ ಅಧಿಕಾರಿಗಳಿಗೆ ಶಾಸಕ ಡಿ.ಸಿ.ಗೌರಿಶಂಕರ್ ತಾಕೀತು ಮಾಡಿದರು.

    ತಾಪಂ ಸಭಾಂಗಣದದಲ್ಲಿ ಶುಕ್ರವಾರ ಗ್ರಾಮಾಂತರ ಕ್ಷೇತ್ರದ ತ್ರೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಗೌರಿಶಂಕರ್, ಗ್ರಾಮಾಂತರ ಕ್ಷೇತ್ರದಲ್ಲಿ ಕಾನೂನು ಉಲ್ಲಂಘಿಸಿ ಅರಣ್ಯ ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದು ಅಧಿಕಾರಿಗಳು ಜಾಣಕುರುಡುತನ ತೋರುತ್ತಿದ್ದಾರೆ. ಮೈದಾಳ ಸೇರಿ ಹಲವು ಕಡೆ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಈ ಕೂಡಲೇ ಗಣಿಗಾರಿಕೆ ಮಾಲೀಕರಿಗೆ ರಸ್ತೆ ದುರಸ್ತಿ ಮಾಡಿಕೊಡುವಂತೆ ಲೊಕೋಪಯೋಗಿ ಇಲಾಖೆ ಅಧಿಕಾರಿಗಳು ನೋಟಿಸ್ ನೀಡುವಂತೆ ಸೂಚಿಸಿದರು.

    ರೈತರ ಮೇಲೆ ದಬ್ಬಾಳಿಕೆ ಮಾಡುವುದನ್ನು ಬಿಟ್ಟು ಅಕ್ರಮವಾಗಿ ಅರಣ್ಯ ಒತ್ತುವರಿ ಮಾಡಿಕೊಂಡು ಗಣಿಗಾರಿಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವವರ ಮೇಲೆ ಯಾವ ಕ್ರಮ ಕೈಗೊಂಡಿದ್ದೀರಿ? ತಪ್ಪಿತಸ್ಥರಿಂದ ವಸೂಲಿ ಮಾಡಿರುವ ರಾಜಧನ ಎಷ್ಟು ಎಂದು ಪ್ರಶ್ನಿಸಿದರು.

    37 ಕೊಠಡಿ ನಿರ್ಮಾಣ: ಕರೊನಾ ಸೋಂಕಿನ ನಡುವೆ ಶಾಲಾ ಮಕ್ಕಳಿಗೆ ಶಿಕ್ಷಣಕ್ಕೆ ಕೊರತೆ ಉಂಟಾಗಿದ್ದು ಮಕ್ಕಳ ಶಿಕ್ಷಣದ ಬಗ್ಗೆ ಇಲಾಖೆ ಕ್ರಮವಹಿಸಿದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ಶಾಲೆಯ 20 ಮಕ್ಕಳಂತೆ ಗ್ರಾಮದ ಶಾಲೆಯ ಹೊರಗೆ ಬೋಧನೆ ಮಾಡಲಾಗುತ್ತಿದೆ. 6 ತಿಂಗಳು ಶಿಕ್ಷಕರ ಸಮ್ಮುಖದಲ್ಲಿ ಮಕ್ಕಳು ಇಲ್ಲದ ಕಾರಣ ಮಕ್ಕಳಲ್ಲಿ ಹೊಂದಾಣಿಕೆಯ ಮನೋಭಾವ ದೂರ ಆದಂತಿದೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಓದಿನ ಜತೆಗೆ ಕರೊನಾ ಹಾಗೂ ಇತರ ಮಾರ್ಗದರ್ಶನ ನೀಡುವ ಮೂಲಕ ವಿದ್ಯಾಗಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಇಒ ಹನುಮಾನಾಯಕ್ ಹೇಳಿದರು.

    ಗ್ರಾಮಾಂತರದ ಹಲವು ಕಡೆ ಶಾಲೆಗಳಲ್ಲಿ 11 ಲಕ್ಷ ರೂ.,ನಂತೆ ಒಟ್ಟು 37 ಕಟ್ಟಡಗಳ ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಕೊಠಡಿಗಳ ಕೊರತೆ ಎದುರಾಗುವುದಿಲ್ಲ ಎಂದರು. ತಹಸೀಲ್ದಾರ್ ಜಿ.ವಿ.ಮೋಹನ್ ಕುಮಾರ್, ತಾಪಂ ಇಒ ಜೈಪಾಲ್, ತಾಲೂಕು ಪಿಎಲ್‌ಡಿ ಬ್ಯಾಂಕ್‌ನ ಅಧ್ಯಕ್ಷ ಸಿದ್ದಪ್ಪ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts