More

    ಲೋಕಸಭಾ ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್- ಸಚಿವ ತಂಗಡಗಿ ಹೇಳಿಕೆಗೆ ಶಾಸಕ ಹರೀಶ್ ಪೂಂಜ ತಿರುಗೇಟು

    ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಗೆ ಜೈಕಾರ ಹಾಕುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ಹತಾಶೆಯ ಭಾವನೆಯಿಂದ ಕೂಡಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೂ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಿರುವುದು ವೇದ್ಯವಾಗುತ್ತದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು.

    ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ತಂಗಡಗಿ ಹೇಳಿಕೆಯನ್ನು ಬಿಜೆಪಿ ತೀಕ್ಷ್ಣವಾಗಿ ಖಂಡಿಸುತ್ತದೆ. ಅವರಿಗೆ ತಾಕತ್ತಿದ್ದರೆ ಮೊದಲು ಕಾಂಗ್ರೆಸ್ ಸರ್ಕಾರವನ್ನು ಸರಿದಾರಿಗೆ ತರಲಿ. ಸ್ವತಃ ಹಿಂದುಳಿದ ಸಮುದಾಯಕ್ಕೆ ಸೇರಿದವರಾಗಿದ್ದೂ ದಲಿತ, ಹಿಂದುಳಿದ ವರ್ಗದವರ ಕುರಿತ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದ ಧೋರಣೆಯನ್ನು ಸರಿಪಡಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಭಾಗ್ಯಗಳಿಗೆ ಹಣ ಹೊಂದಿಸಲು ದಲಿತ, ಹಿಂದುಳಿದ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನೂ ದುರ್ಬಳಕೆ ಮಾಡಿಕೊಂಡಿದೆ. ಕಳೆದ ವರ್ಷ ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ 11 ಸಾವಿರ ಕೊಟಿ ರೂ ಹಾಗೂ ಈ ವರ್ಷ 14 ಸಾವಿರ ಕೋಟಿ ರೂ.ಗಳನ್ನು ಬಿಟ್ಟಿ ಭಾಗ್ಯಗಳಿಗೆ ದುರ್ಬಳಕೆ ಮಾಡಿಕೊಂಡಿದೆ. ಆಮೂಲಕ ಹಿಂದುಳಿದ ವರ್ಗಗಳ ಬಗ್ಗೆ ತನಗೆಷ್ಟು ಕಾಳಜಿ ಇದೆ ಎಂಬುದನ್ನು ತಾನೇ ಬಹಿರಂಗಪಡಿಸಿದೆ ಎಂದರು.

    ಚುನಾವಣಾ ಸೋಲಿನ ವಾಸನೆ ಬರುತ್ತಿದ್ದಂತೆ ಕಾಂಗ್ರೆಸ್ ಮೋದಿಯವರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತದೆ, ದೇಶದಲ್ಲಿ ಪಾತಾಳಕ್ಕೆ ತಲುಪಿರುವ ಕಾಂಗ್ರೆಸ್, ರಾಜ್ಯದಲ್ಲೂ ಪಾತಾಳಕ್ಕೆ ಕುಸಿಯುವ ಭಯದಿಂದ ಈ ರೀತಿ ಹೇಳಿಕೆಗಳನ್ನು ನೀಡುತ್ತಿದೆ. ದೇಶದ ಯುವಕರು ಮೋದಿಯವರ ಆಡಳಿತವನ್ನು ಮೆಚ್ಚಿ ಮೂರನೇ ಬಾರಿಗೆ ಮೋದಿಯವರನ್ನು ಗೆಲ್ಲಿಸುವ ಉತ್ಸಾಹವನ್ನು ಕಾಂಗ್ರೆಸ್ಸಿಗೆ ನೋಡಲಾಗುತ್ತಿಲ್ಲ. ಈ ಹೊಟ್ಟೆಯುರಿಯೇ ಕಾಂಗ್ರೆಸ್ ನಾಯಕರ ದ್ವೇಷದ ಹೇಳಿಕೆಗಳಿಗೆ ಕಾರಣ ಎಂದರು.

    *ಸುಳ್ಳು ಹೇಳಿ ಮೋಸ ಮಾಡಿದ ಕಾಂಗ್ರೆಸ್

    ನರೇಂದ್ರ ಮೋದಿಯವರ ಆಡಳಿತದಲ್ಲಿ ಯುವಕರು ತಮ್ಮದೇ ದೇಶದ ನೂರಾರು ತಂತ್ರಜ್ಞಾನ ಆಧಾರಿತ ಸ್ಟಾಟಪ್ ಸಂಸ್ಥೆಗಳನ್ನು ಶುರುಮಾಡಿದ್ದಾರೆ, ಅದಕ್ಕಾಗಿಯೇ ಮೋದಿಗೆ ಮತ ನೀಡುತ್ತಾ ಬಂದಿದ್ದಾರೆ. ಆದರೆ ಕಾಂಗ್ರೆಸ್ಸಿನ 53 ವರ್ಷದ ನಕಲಿ ಗಾಂಧಿ ಕುಟುಂಬದವರನ್ನು ಓಲೈಸುತ್ತ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ ಎಂಬ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. 2022-23 ರಲ್ಲಿ 5.20 ಲಕ್ಷ ಯುವಕರು ಪದವಿ ಪಡೆದಿದ್ದಾರೆ. ಆದರೆ ಕಾಂಗ್ರೆಸ್ಸಿನ ಯುವನಿಧಿ ಯೋಜನೆಯಡಿಯಲ್ಲಿ ಕೇವಲ 3500 ಯುವಕರಿಗೆ ಹಣ ಸಿಕ್ಕಿದೆ. ಯುವಕರಿಗೆ ಸುಳ್ಳು ಹೇಳಿ ಮೋಸ ಮಾಡಿದ ಕಾಂಗ್ರೆಸ್ ರಾಜ್ಯದ ಯುವ ಜನತೆಯ ಕ್ಷಮೆ ಕೇಳಬೇಕು ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

    ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಕೊಟ್ಯಾಡಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕುಮಾಲ್ ಗುರುವಾಯನಕೆರೆ, ಭರತ್ ರಾಜ್ ಕೃಷ್ಣಾಪುರ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಯುವಮೋರ್ಚಾ ಉಪಾಧ್ಯಕ್ಷ ಅಶ್ರಿತ್ ನೋಂಡ, ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ ಪೂಜಾರಿ, ಮಾಧ್ಯಮ ಸಹ ಸಂಚಾಲಕ ಮನೋಹರ್ ಶೆಟ್ಟಿ ಕದ್ರಿ ಉಪಸ್ಥಿತರಿದ್ದರು.

    ——————-

    ಮೋದಿಯ ಗೆಲುವು ಕಾಂಗ್ರೆಸ್‌ಗೆ ಭಯ

    ಸುಮಾರು 1.84 ಕೋಟಿ ಮೊದಲ ಬಾರಿಗೆ ಮತಚಲಾಯಿಸುವವರು ಮೋದಿಯವರ ಜೊತೆಗಿದ್ದಾರೆ. 20-29 ವರ್ಷ ವಯಸ್ಸಿನ ಯುವಕರು 19.74 ಕೋಟಿ ಮತದಾರರು , ಮೋದಿಯವರ ಬಗ್ಗೆ ಒಳ್ಳೆಯ ಮಾತನಾಡುತ್ತಿದ್ದಾರೆ, ಅದಕ್ಕಾಗಿಯೇ ಕಾಂಗ್ರೆಸ್ ಹೆದರುತ್ತಿದೆ. ಮೋದಿಯವರ ಪರ ಘೋಷಣೆ ಕೂಗಿದವರಿಗೆ ಕಪಾಳಮೋಕ್ಷ ಮಾಡುವ ಸಚಿವರ ಕರೆ ಗಾಂಧಿಯವರ ಅಹಿಂಸಾತ್ಮಕ ಆದರ್ಶಗಳಿಗೆ ವಿರುದ್ಧವಾಗಿದೆ. ಇದು ಕಾಂಗ್ರೆಸ್ ಪಕ್ಷದ ನೀತಿಯಲ್ಲಿ ಆತಂಕಕಾರಿ ಬದಲಾವಣೆಯನ್ನು ಸೂಚಿಸುತ್ತದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಇಂತಹ ಹೇಳಿಕೆಗಳನ್ನು ಸಮರ್ಥಿಸಿಕೊಳ್ಳುತ್ತಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸವಾಲೆಸೆಯುವಂತಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts