More

    ಕರೊನಾ ಸೋಂಕಿತನ ಶವ ಊರಿಗೆ ತರದಂತೆ ವಿರೋಧ; ಸ್ವತಃ ಆಂಬುಲೆನ್ಸ್ ಚಲಾಯಿಸಿಕೊಂಡು ಸ್ಮಶಾನಕ್ಕೆ ಕೊಂಡೊಯ್ದ ಶಾಸಕ

    ದಾವಣಗೆರೆ: ಕರೊನಾದಿಂದ ಮೃತಪಟ್ಟ ಯುವಕನ ದೇಹವನ್ನು ತರದಂತೆ ಗ್ರಾಮಸ್ಥರು ವಿರೋಧಿಸಿದ ಅಮಾನವೀಯ ನಡೆ ಒಂದೆಡೆಯಾದರೆ, ಮತ್ತೊಂದೆಡೆ ಅದೇ ಶವವನ್ನು ಸ್ವತಃ ಆಂಬುಲೆನ್ಸ್​ ಚಲಾಯಿಸಿಕೊಂಡು ಬೇರೆಡೆಯ ಸ್ಮಶಾನಕ್ಕೆ ಕೊಂಡೊಯ್ದು ಸಂಸ್ಕಾರ ನಡೆಸಿ ಶಾಸಕರೊಬ್ಬರು ಮಾನವೀಯತೆ ಮೆರೆದಿದ್ದಾರೆ.

    ಆಂಧ್ರಪ್ರದೇಶ ಮೂಲದ ಕುಟುಂಬವೊಂದು ಹೊನ್ನಾಳಿಯಲ್ಲಿ ನೆಲೆಸಿದ್ದು, ಆ ಕುಟುಂಬಕ್ಕೆ ಸೇರಿದ 31 ವರ್ಷದ ವ್ಯಕ್ತಿ ಕರೊನಾ ಸೋಂಕಿತನಾಗಿ ಚಿಕಿತ್ಸೆ ಪಡೆಯುತ್ತಿದ್ದ. ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ರೇಣುಕಾಚಾರ್ಯ ಅವರು ಬೆಳಗ್ಗೆ ಈ ಸೋಂಕಿತನ ಯೋಗಕ್ಷೇಮ ವಿಚಾರಿಸಿಕೊಂಡು ಬಂದಿದ್ದರು. ಅದಾದ ಒಂದು ಗಂಟೆಯಲ್ಲಿ ಈ ವ್ಯಕ್ತಿ ಮೃತಪಟ್ಟಿದ್ದ. ಆದರೆ ಈತನ ಶವವನ್ನು ಊರಿಗೆ ಕಳುಹಿಸಿಕೊಡದಂತೆ ಆಂಧ್ರಪ್ರದೇಶದ ಗ್ರಾಮವೊಂದರಿಂದ ವಿರೋಧ ವ್ಯಕ್ತವಾಗಿತ್ತು.

    ಇದನ್ನೂ ಓದಿ: ಸೋಂಕಿತ ತಾಯಿ ತೀರಿಹೋದ ಮೂರೇ ದಿನಕ್ಕೆ ಅಣ್ಣ-ತಮ್ಮನೂ ಕರೊನಾಗೆ ಬಲಿ; ಅಮ್ಮಂದಿರ ದಿನವೇ ಇಬ್ಬರೂ ಏಕಕಾಲಕ್ಕೇ ನಿಧನ!

    ಈ ವಿಷಯವನ್ನು ತಿಳಿದ ಶಾಸಕ ರೇಣುಕಾಚಾರ್ಯ ಅವರು ಕೊನೆಗೆ ತಾವೇ ಆಂಬುಲೆನ್ಸ್ ಚಲಾಯಿಸಿಕೊಂಡು ಹೊನ್ನಾಳಿಯ ಸ್ಮಶಾನಕ್ಕೆ ಶವವನ್ನು ಕೊಂಡೊಯ್ದು ಅಲ್ಲಿ ಕುಟುಂಬಸ್ಥರ ಸಮ್ಮುಖ ಶವಸಂಸ್ಕಾರ ಮಾಡಿಸಿದ್ದಾರೆ. ಹೊನ್ನಾಳಿಯ ಹಿಂದೂ ರುದ್ರಭೂಮಿಯಲ್ಲಿ ಶಾಸಕರೇ ನೇತೃತ್ವವಹಿಸಿ ಸುಗಮವಾಗಿ ಅಂತ್ಯಸಂಸ್ಕಾರ ನಡೆಯುವಂತೆ ನೋಡಿಕೊಂಡು, ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಪತಿಯನ್ನು ಹೋಮಕುಂಡದಲ್ಲಿ ಹಾಕಿ ಕೊಲೆ ಮಾಡಿದ್ದ ಪತ್ನಿ; ಬೆಚ್ಚಿಬೀಳಿಸಿದ್ದ ಹತ್ಯೆ ಪ್ರಕರಣದ ತೀರ್ಪು ಮುಂದೂಡಿಕೆ

    ಕಂದಕಕ್ಕೆ ಬೈಕ್​ ಬಿದ್ದು ಸ್ಥಳದಲ್ಲೇ ಮೃತಪಟ್ಟ ಸವಾರ; 20 ಗಂಟೆಗಳ ಬಳಿಕ ಗೊತ್ತಾಯ್ತು ವಿಷಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts