More

    ಬೇಲೂರಿನಲ್ಲಿ ಶಾಸಕ ಎಚ್.ಕೆ.ಸುರೇಶ್ ರೋಡ್‌ಶೋ

    ಬೇಲೂರು: ಎನ್‌ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಶಾಸಕ ಎಚ್.ಕೆ.ಸುರೇಶ್ ನೇತೃತ್ವದಲ್ಲಿ ಇಲ್ಲಿನ ಶ್ರೀಚನ್ನಕೇಶವಸ್ವಾಮಿ ದೇವಾಲಯದ ಮುಂಭಾಗದಿಂದ ಮುಖ್ಯರಸ್ತೆ ಮೂಲಕ ನೆಹರು ನಗರದವರೆಗೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಪಟ್ಟಣದಲ್ಲಿ ಸೋಮವಾರ ರೋಡ್ ಶೋ ನಡೆಸಿ ಮತ ಯಾಚಿಸಿದರು.

    ಶಾಸಕ ಎಚ್.ಕೆ.ಸುರೇಶ್ ಮಾತನಾಡಿ, ಎನ್‌ಡಿಎ ಅಭ್ಯರ್ಥಿ ಪರವಾಗಿ ಎರಡೂ ಪಕ್ಷದ ಕಾರ್ಯಕರ್ತರು ರೋಡ್ ಶೋ ಮೂಲಕ ಮನೆ ಮನೆಗೆ ತೆರಳಿ ಮತಯಾಚಿಸುತ್ತಿದ್ದೇವೆ. ದೇಶಕ್ಕೆ ಮತ್ತೊಮ್ಮೆ ಮೋದಿ ಪ್ರಧಾನಿ ಆಗಬೇಕು ಎಂಬ ನಿಟ್ಟಿನಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಹೆಚ್ಚು ಮತಗಳಿಂದ ಗೆಲ್ಲಿಸಬೇಕಿದೆ. ಆದ್ದರಿಂದ ಕೇಂದ್ರ ಸರ್ಕಾರದ ಯೋಜನೆಗಳನ್ನು ಮತದಾರರಿಗೆ ತಿಳಿಸುವ ಮೂಲಕ ಮನೆ ಮನೆಗೆ ತೆರಳಿ ಮತಯಾಚಿಸುತ್ತಿದ್ದೇವೆ ಎಂದರು.

    ಜೆಡಿಎಸ್ ತಾಲೂಕು ಅಧ್ಯಕ್ಷ ತೋ.ಚ.ಅನಂತ ಸುಬ್ಬರಾಯ, ನಗರ ಕಾರ್ಯಾಧ್ಯಕ್ಷ ಮಲ್ಲೇಗೌಡ, ನಗರಾಧ್ಯಕ್ಷ ಮೋಹನ್ ಕುಮಾರ್, ಕಾರ್ಯದರ್ಶಿ ಸತೀಶ್, ಖಾದರ್, ಬಿಜೆಪಿ ನಗರಾಧ್ಯಕ್ಷ ವಿನಯ್, ಪುರಸಭೆ ಮಾಜಿ ಅಧ್ಯಕ್ಷರಾದ ಶ್ರೀನಿಧಿ, ಭಾರತಿ ಅರುಣ್‌ಕುಮಾರ್, ಪುರಸಭೆ ಸದಸ್ಯರಾದ ಪ್ರಭಾಕರ್, ಜಗದೀಶ್ ಸೇರಿದಂತೆ ಇತರರಿದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts