More

    ಕೇಂದ್ರದ ಮೇಲೆ ಗೂಬೆ ಕೂಡಿಸುವ ಪ್ರಯತ್ನ

    ಹೂವಿನಹಡಗಲಿ: ಸಂಕಷ್ಟಕ್ಕೆ ಸಿಲುಕಿದ ರೈತರ ನೋವಿಗೆ ಸ್ಪಂದಿಸದೇ ರಾಜ್ಯ ಸರ್ಕಾರದ ನಾಯಕರು ಮೋಜು ಮಸ್ತಿಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಹಗರಿಬೊಮ್ಮನಹಳ್ಳಿ ಜೆಡಿಎಸ್ ಶಾಸಕ ಕೆ.ನೇಮಿರಾಜ ನಾಯ್ಕ ಟೀಕಿಸಿದರು.

    ರಾಜ್ಯ ಸರ್ಕಾರದ ನಾಯಕರು ಮೋಜು ಮಸ್ತಿ

    ತಾಲೂಕಿನ ವಿನೋಬನಗರ ಬಳಿಯ ರೈತರ ಭೂಮಿಗಳಿಗೆ ಮಠಾಧೀಶರ ಧರ್ಮ ಪರಿಷತ್ತ ಪದಾಧಿಕಾರಿಗಳೊಂದಿಗೆ ಮಂಗಳವಾರ ಬರ ಅಧ್ಯಯನ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಂಗಾರು, ಹಿಂಗಾರು ವೈಫಲ್ಯದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಮಾತ್ರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಇದನ್ನೂ ಓದಿ: ಭಾರತದ ಸೋಲು ಕ್ರಿಕೆಟ್​ಗೆ​ ಗೆಲುವು! ಕರ್ಮದ ಫಲ ಎಂದು​ ನಾಲಿಗೆ ಹರಿಬಿಟ್ಟ ಅಬ್ದುಲ್​ ರಜಾಕ್​

    ಸರ್ಕಾರ ಬರಪೀಡಿತ ತಾಲೂಕುಗಳನ್ನು ಘೋಷಿಸಿದೆ. ಆದರೆ ಪರಿಹಾರ ನೀಡಲು ಮುಂದಾಗಿಲ್ಲ. ಹಿಂದೆ ಆಡಳಿತ ನಡೆಸಿದ್ದ ರಾಜ್ಯ ಸರ್ಕಾರಗಳು ಕೇಂದ್ರದ ನೆರವಿಗಾಗಿ ಕಾಯುತ್ತಿರಲಿಲ್ಲ. ರೈತರಿಗೆ ಬರ ಪರಿಹಾರ ನೀಡುತ್ತಿದ್ದವು. ಆದರೆ ಈಗಿನ ಸರ್ಕಾರ ಬರ ಪರಿಹಾರಕ್ಕೆ ಬಿಡಿಗಾಸು ಬಿಡುಗಡೆಗೊಳಿಸದೇ ಕೇವಲ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಟೀಕಿಸಿದರು.

    ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಸರ್ಕಾರ ಹಗಲು ದರೋಡೆಗೆ ನಡೆಸುತ್ತಿದೆ. ರಾಜ್ಯಾದ್ಯಂತ ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್‌ಗಳನ್ನು ಹೆಚ್ಚುವರಿ ತೋರಿಸಿ ಹಣ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಜನಪರ ಕಾಳಜಿ ಇದ್ದಲ್ಲಿ ಕೂಡಲೇ ರೈತರಿಗೆ ಬರ ಪರಿಹಾರ ವಿತರಿಸಬೇಕು ಎಂದು ಒತ್ತಾಯಿಸಿದರು.

    ಜೆಡಿಎಸ್ ತಾಲೂಕಾಧ್ಯಕ್ಷ ಸಕ್ರಳ್ಳಿ ಕೊಟ್ರೇಶ್, ಕಾರ್ಯದರ್ಶಿ ದೇವರಾಜ, ನಂದಿಪುರದ ಮಹೇಶ್ವರ ಸ್ವಾಮೀಜಿ, ಮರಿಯಮ್ಮನಹಳ್ಳಿಯ ಮಲ್ಲಿಕಾರ್ಜುನ ಸ್ವಾಮೀಜಿ, ಕೊಟ್ಟೂರಿನ ಚಾನುಕೋಟಿ ಹಾಗೂ ವಿವಿಧ ಮಠಗಳ ಮಠಾಧೀಶರು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts