

ಮಂಗಳೂರು : ಬೋಳಿಯಾರ್‌ನಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾದ ಕಾರ್ಯಕರ್ತರಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಬಿಗಿಗೊಳಿಸಬೇಕೆಂದು ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದರು.
ವಿಧಾನಸಭೆಯ ಸ್ಪೀಕರ್ ಅವರ ಕ್ಷೇತ್ರದಲ್ಲೇ ಇಂತಹ ರಾಜಕೀಯ ದ್ವೇಷದ ದುಷ್ಕೃತ್ಯಗಳು ನಡೆಯುತ್ತಿರುವುದು
ಆತಂಕಕಾರಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ, ಗೂಂಡಾ ಕಾಯ್ದೆ ಸೇರಿದಂತೆ ದೌರ್ಜನ್ಯ ಮುಂದುವರಿದಿದ್ದು ಈಗ ಚೂರಿ ಇರಿತ, ಮಾರಣಾಂತಿಕ ಹಲ್ಲೆಯ ಮಟ್ಟಕ್ಕೆ ತಲುಪಿ ಕಾಂಗ್ರೆಸ್ ಆಡಳಿತದಲ್ಲಿ ನ್ಯಾಯವೇ ಇಲ್ಲವಾಗಿದೆ. ಇಂತಹ ರಾಜಕೀಯ ದ್ವೇಷದ ಹಲ್ಲೆಗಳು ಮುಂದಿನ ದಿನಗಳಲ್ಲಿ ಜಿಲ್ಲೆಯ ಅಶಾಂತಿಗೆ ಕಾರಣವಾಗಲಿದ್ದು ಕೂಡಲೇ ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕೆಂದು ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
................................