

ಮಂಗಳೂರು : ಮಳೆಯ ಆರ್ಭಟಕ್ಕೆ ನಗರದ ಕುಲಶೇಖರ ಕೋಟಿಮುರ ಸಿಲ್ವರ್‌ಗೇಟ್ ಗ್ರಂಥಾಲಯದ ಬಳಿ ಇರುವ ನಾಗೇಶ್ ಎಂಬವರ ಮನೆ ಕುಸಿದು ಬಿದ್ದಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ. ಶಾಸಕ ವೇದವ್ಯಾಸ ಕಾಮತ್ ಸ್ಥಳಕ್ಕೆ ಭೇಟಿ ಕುಟುಂಬಸ್ಥರಿಗೆ
ಧೈರ್ಯ ತುಂಬಿದರು. ಪರಿಹಾರ ಕಾರ್ಯದ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕರೆ ಮಾಡಿ ಸೂಚಿಸಿದರು.
ಅಜಯ್ ಕುಲಶೇಖರ, ನಿತಿನ್ ಕುಮಾರ್, ಅನಿಲ್, ಹರಿಣಿ , ಪ್ರೇಮ್, ಪ್ರಶಾಂತ್, ಸುಶಾಂತ್ ಉಪಸ್ಥಿತರಿದ್ದರು. ನಗರದ ಗುಜ್ಜರಕೆರೆ ಬಳಿ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದ್ದು ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ನೀಡಿ ಅಗತ್ಯ ಕಾರ್ಯಾಚರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು