

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ದರೆಗುಡ್ಡೆ ಪಣಪಿಲ ಗ್ರಾಮದ ಇಟಲ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಮೂಡುಬಿದಿರೆ ಶಾಸಕ ಉಮಾನಾಥ ಎ.ಕೋಟ್ಯಾನ್ ಭೇಟಿ ನೀಡಿ ದೇವಸ್ಥಾನದ ಜೀರ್ಣೋದ್ಧಾರ ಪ್ರಗತಿ ಕಾರ್ಯ ಪರಿಶೀಲಿಸಿದರು.
ದರೆಗುಡ್ಡೆಯಿಂದ ದೇವಸ್ಥಾನಕ್ಕೆ ಹೋಗುವ ಮುಖ್ಯರಸ್ತೆಯನ್ನು ವಿಸ್ತರಣೆಗೊಳಿಸಿ ಅಭಿವೃದ್ಧಿಪಡಿಸಲು 50 ಲಕ್ಷ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಶಾಸಕರನ್ನು ಕ್ಷೇತ್ರದ ವತಿಯಿಂದ ಸನ್ಮಾನಿಸಲಾಯಿತು. ಆಡಳಿತ ಮೊಕ್ತೇಸರ ವಿಮಲ್ ಕುಮಾರ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಕೇಶ್ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬೇಲೊಟ್ಟು ಅಶೋಕ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಮುಖ್ಯ ಅರ್ಚಕ ನಾಗರಾಜ ಭಟ್ ಪ್ರಾರ್ಥಿಸಿ, ಪ್ರಸಾದ ವಿತರಿಸಿದರು.