

ಪಡುಬಿದ್ರಿ: ಪ್ರಧಾನ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಪ್ರಯುಕ್ತ ಉಚಿತ ಆಟೋ ರಿಕ್ಷಾ ಪ್ರಯಾಣ ಸೌಲಭ್ಯಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು.
ಪ್ರತೀ ವರ್ಷವೂ ಮೋದಿಯ ಜನ್ಮದಿನದಂದು ತಮ್ಮ ಆಟೋದಲ್ಲಿ ಉಚಿತ ಪ್ರಯಾಣ ಸೌಲಭ್ಯ ನೀಡುವ ಕಾಪು ಮಂಡಲ ಬಿಜೆಪಿ ಎಸ್‌ಸಿ ಮೋರ್ಚಾ ವಾಜಿ ಅಧ್ಯಕ್ಷ ಚಂದ್ರ ಮಲ್ಲಾರ್ ಹಾಗೂ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ನಜೀರ್ ಅವರನ್ನು ಶಾಸಕರು ಸನ್ಮಾನಿಸಿದರು.
ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ.ಸುವರ್ಣ, ವಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಕಾಪು ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ ಶಿವಾನಂದ, ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುವಾ ಶೆಟ್ಟಿ, ಕಾಪು ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಗುರುರಾಜ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲಕಷ್ಣ ರಾವ್ ಉಪಸ್ಥಿತರಿದ್ದರು.