ಮಾಡಾಳ್ ವಿರೂಪಾಕ್ಷಪ್ಪ ಬಂಧನ; ಕಾರಿನಲ್ಲಿ ತೆರಳುತ್ತಿದ್ದಾಗ ಅಡ್ಡಗಟ್ಟಿ ಬಂಧಿಸಿದ ಪೊಲೀಸರು

Madal F
Published on

ತುಮಕೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿರುವ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಕೊನೆಗೂ ಬಂಧಿಸಲ್ಪಿಟ್ಟಿದ್ದಾರೆ. ಬಂಧನದ ಭೀತಿಯಿಂದ ಕಾರಿನಲ್ಲಿ ಬೇರೆಡೆಗೆ ತೆರಳುತ್ತಿದ್ದ ಅವರನ್ನು ಮಾರ್ಗಮಧ್ಯೆ ಅಡ್ಡಗಟ್ಟಿ ಅರೆಸ್ಟ್​ ಮಾಡಲಾಗಿದೆ.

ತುಮಕೂರಿನ ಕ್ಯಾತಸಂದ್ರ ಟೋಲ್ ಗೇಟ್​ ಬಳಿ ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪರನ್ನು ಬಂಧಿಸಿದ್ದು, ವಶಕ್ಕೆ ಪಡೆದು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಶಾಸಕ ಮಾಡಾಳ್ ಚಿತ್ರದುರ್ಗದಿಂದ ಬೆಂಗಳೂರಿನತ್ತ ಕೆಎ 17 ಝಡ್ 7929 ನಂಬರಿನ ಬಿಳಿ ಇನೋವಾ ಕಾರಿನಲ್ಲಿ ತೆರಳುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿರುವ ಮಾಡಾಳ್ ನಿರೀಕ್ಷಣಾ ಜಾಮೀನಿಗೆ ಸಲ್ಲಿಸಿದ್ದ ಅರ್ಜಿ ಇಂದು ವಜಾಗೊಂಡಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕ ಕಾರ್ಯಕ್ರಮದಲ್ಲಿದ್ದ ಮಾಡಾಳ್, ಅದನ್ನು ಅರ್ಧಕ್ಕೇ ಮೊಟಕುಗೊಳಿಸಿ ನಾಪತ್ತೆಯಾಗಿದ್ದರು. ಕೊನೆಗೂ ಲೋಕಾಯುಕ್ತ ಪೊಲೀಸರು ಅವರನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net