ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿಯ ಪತ್ನಿಯೇ ಖಾಸಗಿ ಶಾಲೆ ನಡೆಸುತ್ತಿದ್ದಾರೆ ಎಂದು ಕಿಡಿಕಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಜನಪ್ರತಿನಿಧಿಗಳು ಖಾಸಗಿ ಶಾಲೆ ನಡೆಸುವುದು ಒಳಿತಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಅಸ್ಸಾಂನ ಗುವಾಹಟಿಯಲ್ಲಿ ನಡೆದ ರ್ಯಾಲಿ ಸಂದರ್ಭ ಅರವಿಂದ ಕೇಜ್ರಿವಾಲ್, ಅಲ್ಲಿನ ಮುಖ್ಯಮಂತ್ರಿ ಹಿಮಂತ ಬಿಸ್ವ ಸರ್ಮಾ ವಿರುದ್ಧ ಈ ಗಂಭೀರ ಆರೋಪವನ್ನು ಮಾಡಿದ್ದಾರೆ. ಅಸ್ಸಾಂ ಸಿಎಂ ಪತ್ನಿಯೇ ಖಾಸಗಿ ಶಾಲೆ ತೆರೆದಿದ್ದಾರೆ ಎಂಬುದನ್ನು ನಾನು ಕೇಳಿದ್ದೇನೆ. ಹೀಗಾದರೆ ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಭಾರಿ ಕುಸಿತ ಉಂಟಾವುದು ಖಚಿತ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಇದನ್ನೂ ಒದಿ: ಪ್ಯಾನ್-ಆಧಾರ್ ಲಿಂಕ್ ಗಡುವು ವಿಸ್ತರಣೆ: ನೀವೀಗ ಮಾಡಬೇಕಾದ್ದೇನು?
ಶಾಸಕರು-ಸಚಿವರು ಖಾಸಗಿ ಶಾಲೆಗಳನ್ನು ನಡೆಸಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಅರವಿಂದ ಕೇಜ್ರಿವಾಲ್, ಮೊದಲು ದೆಹಲಿಯಲ್ಲೂ ಹಾಗೇ ಇತ್ತು. ಪ್ರತಿ ಶಾಸಕ-ಸಚಿವ ಖಾಸಗಿ ಶಾಲೆಗಳನ್ನು ನಡೆಸುತ್ತಿದ್ದು, ಅಧಿಕ ಶುಲ್ಕ ವಿಧಿಸುವ ಮೂಲಕ ಅವರು ಶಿಕ್ಷಣ ವ್ಯವಸ್ಥೆಯನ್ನೇ ಹಾಳು ಮಾಡಿದ್ದರು. ಆದರೆ ನಾವು ಅದನ್ನು ಸರಿಪಡಿಸಿದೆವು, ಈಗ ದೆಹಲಿಯಲ್ಲಿ ಸರ್ಕಾರಿ ಶಾಲೆಗಳು ಹೇಗೆ ನಡೆಯುತ್ತಿವೆ ಎಂಬುದನ್ನು ನೀವು ನೋಡಬಹುದು. ದೆಹಲಿಯಲ್ಲಿ ಒಬ್ಬೇ ಒಬ್ಬ ಆಪ್ ಶಾಸಕ-ಸಚಿವ ಖಾಸಗಿ ಶಿಕ್ಷಣ ಸಂಸ್ಥೆ ನಡೆಸುತ್ತಿಲ್ಲ ಎಂದೂ ಅವರು ಹೇಳಿದ್ದಾರೆ.
ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ
4 ವರ್ಷ ಕಳೆದರೂ ಕಳವಾದ ಚಿನ್ನದ ಸರ ಪತ್ತೆ ಮಾಡಲಾಗದೆ ಹೊಸ ಸರ ಕೊಡಿಸಿದ ಪೊಲೀಸರು!; ಆಗಿದ್ದೇನು?