ನಾಳೆ ರಾಜ್ಯದ ಕಾನೂನು ಸುವ್ಯವಸ್ಥೆ ಮೇಲೆ ಹದ್ದಿನ ಕಣ್ಣು

ಬೆಂಗಳೂರು: ನಾಳೆ ಬಹುಮತ ಸಾಬೀತುಪಡಿಸಲು ಸುಪ್ರೀಂ ಆದೇಶ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮೇಲೆ ಹದ್ದಿನ ಕಣ್ಣಿಡಲು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್ ರಾಜು ತಿಳಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ಜಿಲ್ಲೆಗಳ ಪೊಲೀಸ್‌ ಅಧಿಕಾರಿಗಳಿಗೆ ನಾಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಮುಂಜಾಗ್ರತೆ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್ ನಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರಿಗೆ ಭದ್ರತೆ ಕಲ್ಪಿಸಲು ಸೂಚನೆ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ನೃಪತುಂಗ ರಸ್ತೆಯ ಡಿಜಿಪಿ ಕಚೇರಿಯಲ್ಲಿ ಡಿಜಿಪಿ ತುರ್ತು ಸಭೆ ನಡೆಸಿದರು.

ಎಂಎಲ್ಎಗಳಿಗೆ ನಾಳೆ ಯಾವ ರೀತಿ ಭದ್ರತೆ ಕಲ್ಪಿಸಬೇಕು, ಅಧಿವೇಶನಕ್ಕೆ ಕೈಗೊಳ್ಳಬೇಕಾದ ಸಿದ್ಧತೆ ಕುರಿತು ಚರ್ಚೆ ನಡೆಸಿದರು. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *