ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಕೆ. ಸಾಲುಂಡಿಯ ಕನಕರಾಜು ಸಾವಿಗೆ ಶಾಸಕ ಜಿ.ಟಿ. ದೇವೇಗೌಡ, ಮುಡಾದ ತಾಂತ್ರಿಕ ಅಧಿಕಾರಿಗಳು ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯ ನಿರ್ಲಕ್ಷೃವೇ ಕಾರಣ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಧ್ಯಕ್ಷ ಕೆ. ಮರೀಗೌಡ ಆರೋಪಿಸಿದರು.
ಕೆ. ಸಾಲುಂಡಿ ಗ್ರಾಮದಲ್ಲಿ ಮಂಗಳವಾರ ಮೃತ ಕನಕರಾಜುನ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು, ವೈಯಕ್ತಿಕವಾಗಿ ಒಂದು ಲಕ್ಷ ರೂ. ಪರಿಹಾರ ನೀಡಿದರು.
ಜಿ.ಟಿ.ದೇವೇಗೌಡರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ 11 ವರ್ಷದಿಂದ ಶಾಸಕರಾಗಿದ್ದಾರೆ. ಈ ಊರಿನಲ್ಲಿ ಹೆಚ್ಚಾಗಿ ಹಿಂದುಳಿದ ವರ್ಗದ ಜನರು ವಾಸಿಸುತ್ತಿದ್ದಾರೆ. ಎಲ್ಲರೂ ಸಿದ್ದರಾಮಯ್ಯ ಅವರ ಬೆಂಬಗಲಿರೆಂಬ ಕಾರಣಕ್ಕೆ ಅಭಿವೃದ್ಧಿ ನಿರ್ಲಕ್ಷ್ಯ ಮಾಡಿರುವುದೇ ಈ ಅನಾಹುತಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು.
ಈ ಗ್ರಾಮದ ಒಳಚರಂಡಿಗೆ ಸೆಪ್ಟಿಕ್ ಟ್ಯಾಂಕ್ ಮಾಡದಿರುವುದರಿಂದ ಚರಂಡಿಯಲ್ಲಿ ನೀರು ಹರಿಯುತ್ತಿದೆ. ಈ ಒಳಚರಂಡಿ ನೀರು ಬೋರ್‌ವೆಲ್ ಪಕ್ಕದಲ್ಲಿ ಹರಿಯುತ್ತಿರುವುದರಿಂದ ಕುಡಿಯುವ ನೀರು ಕಲುಷಿತವಾಗಿ ಈ ದುರ್ಘಟನೆ ನಡೆದಿದೆ. ಈ ಘಟನೆಯಿಂದ ಹಲವರು ಅನಾರೋಗ್ಯಪೀಡಿತರಾಗಿದ್ದು, ವಾಂತಿಭೇದಿಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಈಗಾಗಲೇ ಜಿಲ್ಲಾ ಆರೋಗ್ಯಾಧಿಕಾರಿ, ಪಟ್ಟಣ ಪಂಚಾಯಿತಿ ಅಧಿಕಾರಿ, ಮುಡಾ ಅಧಿಕಾರಿಗಳಿಗೆ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದು, ಊರಿನಲ್ಲಿ ಸ್ವಚ್ಛತೆ ಮಾಡಲಾಗುತ್ತಿದೆ. ಟ್ಯಾಂಕರ್‌ಗಳಿಂದ ನೀರು ಸರಬರಾಜು ಮಾಡಲಾಗುತ್ತಿದೆ. ಒಳಚರಂಡಿಗೆ ಸೆಪ್ಟಿಕ್ ಟ್ಯಾಂಕ್ ನಿರ್ಮಾಣ ಮಾಡಲು ತಕ್ಷಣ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ಇಂತಹ ದುರ್ಘಟನೆ ಬೇರೆ ಊರುಗಳಲ್ಲಿ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗುವುದು. ಈ ದುರ್ಘಟನೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಯಿಂದ ಮಾಹಿತಿ ಪಡೆದು ಚಿಕಿತ್ಸೆ ಪಡೆಯುತ್ತಿರುವವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದರೊಂದಿಗೆ ಚಿಕಿತ್ಸೆ ವೆಚ್ಚವನ್ನು ಭರಿಸಲು ತಿಳಿಸಿದ್ದಾರೆ ಎಂದು ಹೇಳಿದರು.
ಮಾನವೀಯತೆಯ ದೃಷ್ಟಿಯಿಂದ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕೆ. ಸಾಲುಂಡಿ ಗ್ರಾಮಕ್ಕೆ ಹೊಸದಾಗಿ 3 ಬೋರ್‌ವೆಲ್‌ಗಳನ್ನು ಕೊರೆಸಿ ನೀರು ಸರಬರಾಜು ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕನಕರಾಜು ಸಾವಿಗೆ ಶಾಸಕ, ಅಧಿಕಾರಿಗಳು ಕಾರಣ: ಮುಡಾ ಅಧ್ಯಕ್ಷರ ಆರೋಪ
You Might Also Like
ಭಗವಂತ ಶ್ರೀರಾಮನ ಜೀವನದ ಈ 5 ತತ್ವವನ್ನು ಅಳವಡಿಸಿಕೊಳ್ಳಿ | Success Tips
ಭಾರತದಲ್ಲಿ ಶ್ರೀರಾಮನನ್ನು ಅತಿ ಹೆಚ್ಚು ಪೂಜಿಸಲಾಗುತ್ತದೆ. ಲಂಕಾದ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಇಂದಿಗೂ ದಸರಾ…
ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…
ಬೆಂಗಳೂರು: ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…
ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower
ಬೆಂಗಳೂರು: ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…