More

    ಬಣಜಿಗ ಕ್ಷೇಮಾಭಿವೃದ್ಧಿ ಸಂಘದಿಂದ ಶಾಸಕ ಜಿ.ಎಸ್. ಪಾಟೀಲಗೆ ಸನ್ಮಾನ

    ರೋಣ: ಶಿಕ್ಷಣದಿಂದ ಪ್ರತಿಯೊಂದು ಸಮಾಜದ ಪ್ರಗತಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಬಣಜಿಗ ಸಮಾಜದ ಪ್ರತಿಯೊಬ್ಬರೂ ಶಿಕ್ಷಣವಂತರಾಗಿ ಸಮಾಜದ ಬೆಳವಣಿಗೆಗೆ ಶ್ರಮಿಸಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.


    ಪಟ್ಟಣದ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ಬಣಜಿಗ ಕ್ಷೇಮಾಭಿವೃದ್ಧಿ ಸಂಘ ರೋಣ ತಾಲೂಕು ಘಟಕದಿಂದ ನೂತನ ಶಾಸಕರಿಗೆ, ಸಮಾಜದ ಅಧ್ಯಕ್ಷರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

    ವಿಧಾನಸಭೆ ಚುನಾವಣೆಯಲ್ಲಿ ಅಧಿಕ ಮತಗಳ ಅಂತರದಿಂದ ಗೆಲ್ಲಲು ನನಗೆ ಬಣಜಿಗ ಸಮಾಜದವರ ಆಶೀರ್ವಾದ ಪ್ರಮುಖವಾಗಿದೆ. ತಮ್ಮ ಈ ಪ್ರೀತಿ, ವಿಶ್ವಾಸಕ್ಕೆ ಚ್ಯುತಿ ಬಾರದಂತೆ, ಬಣಜಿಗ ಸಮಾಜದ ಏಳಿಗೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೆನೆ ಎಂದು ಭರವಸೆ ನೀಡಿದರು.


    ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಈ ಹಿಂದೆ ಬಣಜಿಗ ಸಮಾಜ ವ್ಯಾಪಾರದಲ್ಲಿ ತೊಡಗಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಆ ಸ್ಥಾನದಲ್ಲಿ ಮಾರ್ವಾಡಿಗಳು ಮುಂಚೂಣಿಯಲಿದ್ದಾರೆ. ಇದರಿಂದ ಬಣಜಿಗ ಸಮಾಜದವರ ವ್ಯಾಪಾರದ ಮೇಲೆ ಹೊಡೆತ ಬಿದ್ದಿದೆ. ಬಣಜಿಗ ಸಮಾಜ ರಾಜಕೀಯವಾಗಿ ಬೆಳೆಯುತ್ತಿದೆ. ಈವರೆಗೆ ರಾಜ್ಯಕ್ಕೆ 7 ಮುಖ್ಯಮಂತ್ರಿಗಳನ್ನು ಕೊಟ್ಟಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.


    ವೀರಣ್ಣ ಶೆಟ್ಟರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗುಲಗಂಜಿ ಮಠದ ಗುರುಪಾದ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶಿರ್ವಚನ ನೀಡಿದರು. ಗದಗ ಜೆ.ಟಿ. ಕಾಲೇಜು ವಿಶ್ರಾಂತ ಪ್ರಾಚಾರ್ಯ ಮಹಾರುದ್ರಪ್ಪ ನರಗುಂದ ಉಪನ್ಯಾಸ ನೀಡಿದರು.


    ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಬಣಜಿಗ ಸಮಾಜದ ತಾಲೂಕು ಅಧ್ಯಕ್ಷ ಮುತ್ತಣ್ಣ ಸಂಗಳದ ಹಾಗೂ ವಿವಿಧ ಸಾಧಕರನ್ನು ಸನ್ಮಾನಿಸಲಾಯಿತು.


    ಪುರಸಭೆ ಉಪಾಧ್ಯಕ್ಷ ಮಿಥುನ ಪಾಟೀಲ, ಜಿಪಂ ಮಾಜಿ ಉಪಾಧ್ಯಕ್ಷೆ ರೂಪಾ ಅಂಗಡಿ, ಈಶಣ್ಣ ಮುನವಳ್ಳಿ, ಸಂಗಪ್ಪ ಮೆಣಸಿನಕಾಯಿ, ರವಿ ಸಂಗನಬಶೆಟ್ಟರ, ಅಪ್ಪು ಕೊಟಗಿ, ಮುತ್ತಣ್ಣ ಗದಗ, ಶಕುಂತಲಾ ಐಹೊಳ್ಳಿ, ತಾಪಂ ಮಾಜಿ ಸದಸ್ಯ ಸಿದ್ದಣ್ಣ ಯಾಳಗಿ, ವಿರೇಶ ಐಹೊಳ್ಳಿ, ನಾಗೇಶ ಸವಡಿ, ಅನೀಲ ಹೊಸಮನಿ, ಶೇಖಣ್ಣ ಅಳಗವಾಡಿ, ಸೋಮಶೇಖರ ಚರೇದ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts