ಶಾಸಕ ರವೀಂದ್ರ ಶ್ರೀಕಂಠಯ್ಯರಿಂದ ಮತಯಾಚನೆ

ಶ್ರೀರಂಗಪಟ್ಟಣ: ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಶನಿವಾರ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶ್ರೀರಂಗಪಟ್ಟಣ ಅಭಿವೃದ್ಧಿಗೆ ಅನುದಾನ ನೀಡಿದ್ದಾರೆ.

ಜೆಡಿಎಸ್ ಅಭ್ಯರ್ಥಿಗಳು ಕೂಡ ಅಭಿವೃದ್ಧಿ ಪರವಾದ ನಿಲುವು ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಮತದಾರರು ಆಯ್ಕೆ ಮಾಡುವ ಮೂಲಕ ತಮ್ಮ ಸೇವೆ ಮಾಡಲು ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದರು.

Leave a Reply

Your email address will not be published. Required fields are marked *