More

    ನಾನು ಜೆಡಿಎಸ್​ ಬಿಟ್ಟಿಲ್ಲ, ಅವರೇ ಹೊರ ಹಾಕಿದ್ರು ಎನ್ನುತ್ತಲೇ ರಾಜೀನಾಮೆ ಸಲ್ಲಿಸಿದ ಶಾಸಕ ಎ.ಟಿ ರಾಮಸ್ವಾಮಿ!

    ಬೆಂಗಳೂರು: ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಎಟಿ ರಾಮಸ್ವಾಮಿ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿಯವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

    ರಾಜೀನಾಮೆ ಸಲ್ಲಿಸಿದ ನಂತರ ಮಾತನಾಡಿದ ಎಟಿ ರಾಮಸ್ವಾಮಿ, ‘ನಾನು ಇಂದು ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಶಾಸಕಾಂಗ ಪಕ್ಷದ ನಾಯಕರ ಕಚೇರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಸ್ಪೀಕರ್ ಬಂದ ನಂತರ ಅವರನ್ನ ಭೇಟಿ ಆಗ್ತೀನಿ’ ಎಂದಿದ್ದಾರೆ. 

    ಇದನ್ನೂ ಓದಿ; ಸಂಸತ್​ ಸದಸ್ಯತ್ವದಿಂದ ರಾಹುಲ್​ ಗಾಂಧಿ ಅನರ್ಹ; ಕಾಂಗ್ರೆಸ್​ ಸಂಸದರಿಂದ ಸಾಮೂಹಿಕ ರಾಜೀನಾಮೆ!

    ಇದೇ ವೇಳೆ ‘ಜೆಡಿಎಸ್‌ನವರು ನನಗೆ ಶಾಸಕನಾಗಿ ಕೆಲಸ ಮಾಡಲು ಅವಕಾಶ ನೀಡಿದ್ದಾರೆ. ನಾನೆಂದೂ ವೈಯಕ್ತಿಕ ಲಾಭಕ್ಕಾಗಿ ಆಡಳಿತ ಮಾಡಿರಲಿಲ್ಲ. ವಿಧಾನಸಭೆ ಒಳಗೆ ಮತ್ತು ಹೊರಗೆ ತಪ್ಪನ್ನ ನೇರವಾಗಿ ಮಾತನಾಡಿದ್ದೇನೆ.

    ನನ್ನ ವಿರೋಧಿಗಳು ಒಳ್ಳೆಯ ಆಶಯವನ್ನು ಹೊಂದಲಿ. ಎಲ್ಲರಿಗೂ ನನ್ನ ಧನ್ಯವಾದ ತಿಳಿಸುತ್ತೇನೆ. ನನಗೆ ಜನಸೇವೆಗಾಗಿ ಅವಕಾಶ ಸಿಕ್ಕಿತ್ತು. ಮುಂದೆ ಅವಕಾಶ ಸಿಕ್ಕಿದರೂ ಜನಸೇವೆ ಮಾಡುತ್ತೇನೆ. ಕರ್ನಾಟಕ ರಾಜಕಾರಣ ಹಿಂದೆ ಬಹಳ ಚೆನ್ನಾಗಿತ್ತು , ಈಗ ಬಹಳ ಕೆಟ್ಟದಾಗಿದೆ. ಈಗ ಒಲೈಕೆ ರಾಜಕಾರಣ ನಡೆಯುತ್ತಿದೆ. ಜನರ ಹಿತಾಸಕ್ತಿಗೆ ನಾನು ಕೆಲಸ ಮಾಡಿಲ್ಲ. ಹಾಜರಿಗಾಗಿ ನಾನು ಭಾಗವಹಿಸಿಲ್ಲ, ಸಕ್ರಿಯವಾಗಿ ಭಾಗವಹಿಸಿ ನನ್ನ ಕೆಲಸ ಮಾಡಿದ್ದೇನೆ’ ಎಂದು ತಮ್ಮ ಕಾರ್ಯಾವಧಿಯ ಬಗ್ಗೆ ಹೇಳಿಕೆ ನೀಡಿದ್ದಾರೆ.

    ಈ ಸಂದರ್ಭ ಅವರು ‘ನಾನು ಜೆಡಿಎಸ್‌ ಬಿಟ್ಟಿಲ್ಲ, ಅವರೇ ಹೊರಗೆ ಹಾಕಿದ್ರು. ನಿಮಗೆ ಎಲ್ಲ ಗೊತ್ತಲ್ಲ, ನಾನು ವಿಕ್ಟಿಮ್. ನಾನು ಹಣದ ಶಕ್ತಿಯ ಮುಂದೆ ಬಲಿಪಾಶು ಆದೆ. ಭ್ರಷ್ಟಾಚಾರವನ್ನ ಎತ್ತಿ ತೋರಿಸಿದಕ್ಕೆ ನನ್ನನ್ನ ವಿಕ್ಟಿಮ್ ಮಾಡಿದ್ರು’ ಎಂದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts