More

    ಮಧ್ಯವರ್ತಿಗಳಿಗೆ ದುಡ್ಡು ಕೊಡಬೇಡಿ : ಶಾಸಕ ಸಿದ್ದು ಸವದಿ ಸಲಹೆ

    ರಬಕವಿ/ಬನಹಟ್ಟಿ: ಬಡವರ ಪರವಾದ ಉಪಯುಕ್ತ ಯೋಜನೆಗಳನ್ನು ಸರ್ಕಾರ ನೀಡಿದೆ. ಪಿಂಚಣಿ ಮಾಡಿಸಲು ಮಧ್ಯವರ್ತಿಗಳಿಗೆ ದುಡ್ಡು ಕೊಡಬಾರದು. ಇದು ಸಂಪೂರ್ಣ ಉಚಿತವಾಗಿದೆ ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಸಿದ್ದು ಸವದಿ ಹೇಳಿದರು.

    ರಾಂಪುರ ದಾನಮ್ಮದೇವಿ ಸಮುದಾಯ ಭವನದಲ್ಲಿ ತಾಲೂಕು ಆಡಳಿತದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪಿಂಚಣಿ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
    ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರ ಮಾಸಾಶನ, ಮನಸ್ವಿನಿ ಸೇರಿದಂತೆ ಎಲ್ಲ ಬಗೆಯ ಮಾಸಾಶನದ ಮೊತ್ತವನ್ನು ಸಿಎಂ ಬಸವರಾಜ ಬೊಮ್ಮಾಯಿ ಹೆಚ್ಚಿಸಿದ್ದಾರೆ. ಸರ್ಕಾರ ನೀಡುವ ಎಲ್ಲ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು. ಸರ್ಕಾರದ ನೆರವು ಪಡೆದು ತಮ್ಮ ಬದುಕು ರೂಪಿಸಿಕೊಳ್ಳಲು ಪ್ರಜ್ಞಾವಂತರು ಯತ್ನಿಸಬೇಕೆಂದರು.

    ರೈತರು ಮತ್ತು ನೇಕಾರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ನೆರವಾಗಲು ರಾಜ್ಯ ಸರ್ಕಾರ ವಿದ್ಯಾನಿಧಿ ಯೋಜನೆ ನೀಡುತ್ತಿದೆ. ಸರ್ಕಾರದ ವಿವಿಧ ಇಲಾಖೆಗಳಿಂದ ಹೆಚ್ಚುವರಿ ಅನುದಾನ ತಂದು ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ಶ್ರಮಿಸಲು ನಾನು ಬದ್ಧನಾಗಿದ್ದೇನೆ. ಒಟ್ಟು 400 ಪಿಂಚಣಿ ಆದೇಶ ಪತ್ರಗಳನ್ನು ವಿತರಿಸಲಾಗುತ್ತಿದೆ ಎಂದರು.

    ರಬಕವಿ-ಬನಹಟ್ಟಿ ತಹಸೀಲ್ದಾರ್ ಎಸ್.ಬಿ. ಇಂಗಳೆ ಮಾತನಾಡಿ, ಸಾಮಾಜಿಕ ಭದ್ರತೆ ಯೋಜನೆಯಡಿ ತಮ್ಮ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಸರ್ಕಾರ ಈ ಯೋಜನೆ ಪ್ರಾರಂಭಿಸಿದೆ. ಅರ್ಜಿ ಸಲ್ಲಿಸಿದ 72 ಗಂಟೆಯಲ್ಲಿ ತಮಗೆ ಪಿಂಚಣಿ ನೀಡುವ ಸೌಲಭ್ಯ ಕರ್ನಾಟಕ ಸರ್ಕಾರ ಕಲ್ಪಿಸಿದೆ ಎಂದರು.

    ಗ್ರೇಡ್-2 ತಹಸೀಲ್ದಾರ್ ಎಸ್.ಬಿ. ಕಾಂಬಳೆ, ನಗರಸಭೆ ಅಧ್ಯಕ್ಷ ಸಂಜಯ ತೆಗ್ಗಿ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬಸಪ್ರಭು ಹಟ್ಟಿ, ಗೌರಿ ಮಿಳ್ಳಿ, ಶ್ರೀಶೈಲ ಆಲಗೂರ, ಯಲ್ಲಪ್ಪ ಕಟಗಿ, ವಿಜಯ ಕಲಾಲ, ಚಿದಾನಂದ ಹೊರಟ್ಟಿ, ಸುರೇಶ ಅಕ್ಕಿವಾಟ, ಅಶೋಕ ಹಳ್ಳೂರ, ರವಿ ಕೊರ್ತಿ, ಕಂದಾಯ ನಿರೀಕ್ಷಕ ಪಿ.ಆರ್.ಮಠಪತಿ, ಸದಾಶಿವ ಕುಂಬಾರ, ಮಂಜು ನೀಲನ್ನವರ ಸೇರಿದಂತೆ ಅನೇಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts