ಒಳಚರಂಡಿ ಕಾಮಗಾರಿ ವಿಳಂಬಕ್ಕೆ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ತರಾಟೆ

ಚಿತ್ರದುರ್ಗ: ಕರ್ನಾಟಕ ನಗರ ನೀರು ಮತ್ತು ಒಳಚರಂಡಿ ಮಂಡಳಿಯಿಂದ ನಗರದಲ್ಲಿ ಅನುಷ್ಠಾನ ಆಗುತ್ತಿರುವ ಒಳಚರಂಡಿ ಸಂಪರ್ಕ ಕಾಮಗಾರಿ ಹಾಗೂ ಅಮೃತ್ ಯೋಜನೆ ಕುಡಿವ ನೀರು ಸಂಪರ್ಕ ಕಲ್ಪಿಸುವ ಕಾಮಗಾರಿಗಳ ವಿಳಂಬಕ್ಕೆ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಎಂಟು ವರ್ಷಗಳಿಂದ ಒಳಚರಂಡಿ ಕಾಮಗಾರಿ ನಡೆಯುತ್ತಿರುವುದಕ್ಕೆ ಬೇಸರಿಸಿದರು.

ಮಂಡಳಿ ಕಚೇರಿಯಲ್ಲಿ ಬುಧವಾರ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಂಡಳಿ ಇಇ ಹನುಮಂತಪ್ಪ, ಗುತ್ತಿಗೆ ಕಂಪನಿ ಇಂಜಿನಿಯರ್ ಮಹೇಶ್, ಥರ್ಡ್ ಪಾರ್ಟಿ ಇನ್ ಸ್ಪೆಕ್ಷನ್ ಅಧಿಕಾರಿಗಳನ್ನು ಶಾಸಕರು ತರಾಟೆಗೆ ತೆಗೆದುಕೊಂಡರು.

ಕುಡಿವ ನೀರು ಪೈಪ್ ಅಳವಡಿಸಲು ಈಗ ಅಗೆದಿರುವ ರಸ್ತೆಗಳನ್ನು ದುರಸ್ತಿ ಮಾಡದೆ ಬೇರೆ ಅಗೆಯಬಾರದು ಎಂದು ಕಂಡಿಷನ್ ಹಾಕಿದರು. ಇದೇ ವೇಳೆ ಶಾಸಕರು ಮಂಡಳಿ ಎಂಡಿ ಜಯರಾಮ್, ಸಿಇ ಕೇಶವ್ ಜತೆ ದೂರವಾಣಿಯಲ್ಲಿ ಮಾತನಾಡಿ, ಥರ್ಡ್ ಪಾರ್ಟಿ ಅಧಿಕಾರಿಗಳನ್ನು ಕೆಲಸದಿಂದ ಬಿಡುಗಡೆ ಮಾಡಲು ಪತ್ರ ಬರೆಯುವುದಾಗಿ ತಿಳಿಸಿದರು.

ನಗರಸಭೆ ಆಯುಕ್ತ ಚಂದ್ರಪ್ಪ, ನಗರಸಭೆ ಸದಸ್ಯರು ಇದ್ದರು.

Leave a Reply

Your email address will not be published. Required fields are marked *