More

    ಮಾಜಿ ಶಾಸಕಿ ಮಲ್ಲಾಜಮ್ಮ ನಿವಾಸಕ್ಕೆ ಶಾಸಕ ಉದಯ್ ಭೇಟಿ

    ಕೆ.ಎಂ.ದೊಡ್ಡಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮದ್ದೂರು ಕ್ಷೇತ್ರದ ಶಾಸಕ ಕದಲೂರು ಉದಯ್ ಅವರು ಮಾಜಿ ಶಾಸಕಿ ಮಲ್ಲಾಜಮ್ಮ ಅವರ ನಿವಾಸಕ್ಕೆ ಸೋಮವಾರ ತೆರಳಿ ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತು ಚರ್ಚಿಸಿದರು.

    ಸಮೀಪದ ಬೊಪ್ಪಸಮುದ್ರ ಗ್ರಾಮದ ಮಲ್ಲಾಜಮ್ಮ ನಿವಾಸಕ್ಕೆ ತೆರಳಿದ ಶಾಸಕರು, ಲೋಕಸಭೆ ಚುನಾವಣೆಯ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ಮದ್ದೂರು ಕ್ಷೇತ್ರದಿಂದ ಹೆಚ್ಚಿನ ಬಹುಮತ ನೀಡುವ ಬಗ್ಗೆ ಚರ್ಚಿಸಿದರು.

    ಕದಲೂರು ಉದಯ್ ಮಾತನಾಡಿ, ಮಲ್ಲಾಜಮ್ಮ ಶಾಸಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದ ಪದಾಧಿಕಾರಿಯಾಗಿ ರಾಜಕೀಯದಲ್ಲಿ ಸಾಕಷ್ಟು ಅನುಭವ ಹೊಂದಿದ್ದು, ಹಲವು ಚುನಾವಣೆೆಗಳನ್ನು ನೋಡಿದ್ದು ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲ್ಲಲು ಸಲಹೆ ನೀಡುವಂತೆ ಕೋರಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಶಾಸಕಿ ಮಲ್ಲಾಜಮ್ಮ, ಬಿಜೆಪಿಯ ಜನ ವಿರೋಧಿ ನೀತಿಯನ್ನು ಜನರಿಗೆ ತಿಳಿಸಬೇಕು. ಕಾಂಗ್ರೆಸ್ ಪಕ್ಷ ನೀಡುತ್ತಿರುವ 5 ಗ್ಯಾರಂಟಿಗಳು ನಮ್ಮ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ವರದಾನವಾಗಲಿದ್ದು ಪ್ರತಿ ಗ್ರಾಮಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ತೆರಳಿ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸಬೇಕು ಎಂದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದು ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನ ಗಳಿಸಲಿದ್ದು ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ನಿಶ್ಚಿತ ಎಂದು ತಿಳಿಸಿದರು.
    ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಆಟ ಮಂಡ್ಯ ಕ್ಷೇತ್ರದಲ್ಲಿ ನಡೆಯುವುದಿಲ್ಲ. ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದು ಒಂದು ಕ್ಷೇತ್ರದಲ್ಲಿ ಪಕ್ಷೇತರ ಶಾಸಕರಿದ್ದಾರೆ. ಅವರೂ ನಮ್ಮ ಪಕ್ಷಕ್ಕೆ ಬೆಂಬಲ ಘೊಷಿಸಿದ್ದಾರೆ ಜತೆಗೆ ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕೆ.ಆರ್.ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದು ಜನತೆ ಕಾಂಗ್ರೆಸ್ ಪರವಾಗಿದ್ದಾರೆ ಎಂದರು.

    ಜಿಪಂ ಮಾಜಿ ಸದಸ್ಯ ಎ.ಎಸ್.ರಾಜೀವ್, ಸೋಸೈಟಿ ಅಧ್ಯಕ್ಷ ಶ್ರೀಕಂಠ, ಮುಖಂಡರಾದ ಆರ್‌ಸಿಎಸ್ ಶಿವು, ಯತೀಶ್ ಬಾಬು, ಸಂತೋಷ್, ಅನಿಲ್‌ಕುಮಾರ್ ಸೇರಿದಂತೆ ಹಲವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts