

ಕಾರ್ಕಳ: ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಪಂ ವ್ಯಾಪ್ತಿಯ ವಿವಿಧ ಭಾಗದಲ್ಲಿ ಸಂಭವಿಸಿದ ಮಹಾಸ್ಫೋಟ ಪ್ರವಾಹ ಪೀಡಿತಕ್ಕೊಳಗಾಗಿ ಹಾನಿಗೊಂಡ ಪ್ರದೇಶಗಳಿಗೆ ಶಾಸಕ ವಿ.ಸುನೀಲ್ ಕುಮಾರ್ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ಭೇಟಿ ವೇಳೆ ಸಂತ್ರಸ್ತ ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಹಾನಿಗೊಳಗಾದ ಮನೆ, ಕೃಷಿ ಭೂಮಿ ಪರಿಶೀಲನೆ ನಡೆಸಿ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಂತ್ರಸ್ತ ಕುಟುಂಬಗಳಿಗೆ ತಕ್ಷಣಕ್ಕೆ ಪರಿಹಾರ ಮಂಜೂರಿಗೆ ಕ್ರಮವಹಿಸಲು, ಹಾನಿಗೊಳಗಾದ ರಸ್ತೆ ಮರು ನಿರ್ಮಾಣ ಇತ್ಯಾದಿ ದುರಸ್ತಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೃಷಿ, ತೋಟಗಾರಿಗೆ ಸಂಬಂಧಿಸಿ ಹೆಚ್ಚು ನಷ್ಟ ಉಂಟಾಗಿದ್ದು, ನಷ್ಟದ ಅಂದಾಜುಪಟ್ಟಿ ಸಿದ್ಧಪಡಿಸುವಂತೆ ಕಂದಾಯ, ಕೃಷಿ, ತೋಟಗಾರಿಕೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು.