ಹಲ್ಲರೆ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ

blank

ನಂಜನಗೂಡು: ತಾಲೂಕಿನ ಹುಲ್ಲಹಳ್ಳಿ ಹೋಬಳಿಯ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಸಂಬಂಧ ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

blank

ಬಳಿಕ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಮಾತನಾಡಿದ ದರ್ಶನ್ ಧ್ರುವನಾರಾಯಣ್, ಕಳೆದ ಬಾರಿಯೂ ಗ್ರಾಮದಲ್ಲಿ ನಾಮಫಲಕ ವಿಚಾರವಾಗಿ ಗಲಾಟೆ ನಡೆದಿತ್ತು. ತದನಂತರ ಕ್ರಮ ಕೈಗೊಂಡು ಗ್ರಾಮದಲ್ಲಿ ಶಾಂತಿ ನಿರ್ಮಾಣವಾಗಿತ್ತು. ಆದರೆ, ಬುಧವಾರ ರಾತ್ರಿ ಕಿಡಿಗೇಡಿಗಳು ಅಂಬೇಡ್ಕರ್ ನಾಮಫಲಕಕ್ಕೆ ಅಪಮಾನ ಮಾಡಿದ್ದಾರೆ. ಈಗಾಗಲೇ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಗ್ರಾಮಸ್ಥರು ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ದೂರು ನೀಡಬೇಕು. ಘಟನೆಗೆ ಸಂಬಂಧಿಸಿದಂತೆ ಮಂಗಳವಾರದವರೆಗೆ ಕಾಲಾವಕಾಶ ನೀಡಿದ್ದೀರಿ. ಅದರಂತೆ ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ, ತಹಸೀಲ್ದಾರ್ ಕಾನೂನು ಪ್ರಕಾರ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಪಮಾನ ಮಾಡಿರುವ ಕಿಡಿಗೇಡಿಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮಾತನಾಡಿ, ಇಂದು ನಿಮ್ಮ ಗ್ರಾಮದಲ್ಲಿ ನಾನು ಸಮವಸ್ತ್ರ ಧರಿಸಿ ನಿಲ್ಲಲು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಕಾರಣ. ಈಗಾಗಲೇ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿದ್ದು, ತಾಂತ್ರಿಕ ಸಾಕ್ಷಿಗಳು ಲಭ್ಯವಾದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಮಾಜಿ ಶಾಸಕ ಕಳಲೆಕೇಶವ ಮೂರ್ತಿ, ಡಿವೈಎಸ್ಪಿ ರಘು, ತಹಸೀಲ್ದಾರ್ ಶಿವಕುಮಾರ್ ಕಾಸನೂರು, ಮಾರುತಿ, ನಾಗೇಶ್ ರಾಜ್ ಸೇರಿದಂತೆ ಗ್ರಾಮದ ಮುಖಂಡರು, ಯಜಮಾನರು ಇದ್ದರು.

Share This Article
blank

ಈ ಗಿಡಗಳನ್ನು ಬೆಳೆಸಿದರೆ ಸಾಕು, ನಿಮ್ಮ ಮನೆಗೆ ಒಂದೇ ಒಂದು ಸೊಳ್ಳೆಯೂ ಬರುವುದಿಲ್ಲ..Plants

Plants: ಮಳೆಗಾಲ ಬಂತೆಂದರೆ ಸಾಕು ಅನೇಕ ಜನರು ತಮ್ಮ ಮನೆಯಂಗಳದಲ್ಲಿ ವಿವಿಧ ಗಿಡಗಳನ್ನ ನೆಡಲು ಪ್ರಾರಂಭಿಸುತ್ತಾರೆ.…

ರಾತ್ರಿ 9 ಗಂಟೆಯ ನಂತರ ಊಟ ಮಾಡ್ತೀರಾ? ಹಾಗಾದ್ರೆ ಈ ಎಲ್ಲಾ ಆರೋಗ್ಯ ಸಮಸ್ಯೆ ಬರಬಹುದು ಎಚ್ಚರ! Health

Health: ನಮ್ಮ ಆಧುನಿಕ ಜೀವನಶೈಲಿಯಲ್ಲಿ, ತಡರಾತ್ರಿ ಕೆಲಸ ಮಾಡುವುದು, ಹೆಚ್ಚು ಮೊಬೈಲ್​ ಬಳಕೆ ಮಾಡುವುದು, ತಡವಾಗಿ…

blank