ಮೂಲ್ಕಿ ತಹಸೀಲ್ದಾರ್ ಕಚೇರಿಗೆ ಶಾಸಕ ಭೇಟಿ: ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಪರಿಶೀಲನೆ

New Project (14)
Published on

ಮೂಲ್ಕಿ: ಮೂಲ್ಕಿ ತಹಸೀಲ್ದಾರ್ ಕಚೇರಿ ಸಿಬ್ಬಂದಿ ಕಾರ್ಯವೈಖರಿ ವಿರುದ್ಧ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಸಕರು ಕಚೇರಿ ಸಿಬ್ಬಂದಿ ತುರ್ತು ಸಭೆ ನಡೆಸಿ ಕಚೇರಿಗೆ ಕೆಲಸಕ್ಕೆ ಬರುವ ನಾಗರಿಕರಿಗೆ ಕಚೇರಿಯಲ್ಲಿ ಸರಿಯಾದ ಮಾಹಿತಿ ನೀಡದೆ ಸತಾಯಿಸುತ್ತಿದ್ದಾರೆ ಎಂಬ ಅನೇಕ ದೂರು ಬಂದಿದ್ದು ಮುಂದಿನ ದಿನಗಳಲ್ಲಿ ಇದು ಪುನರಾವರ್ತನೆಗೊಂಡರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು. ಸರ್ಕಾರಿ ಕಚೇರಿಗೆ ಕೆಲಸದ ನಿಮಿತ್ತ ಬರುವ ನಾಗರಿಕರಿಗೆ ಯಾವುದೇ ತೊಂದರೆಯಾದರೆ ನಾನು ಸುಮ್ಮನಿರುವುದಿಲ್ಲ ಎಂದು ಖಡಕ್ ವಾರ್ನಿಂಗ್ ನೀಡಿದರು.

ಮೂಲ್ಕಿ ನಗರ ಪಂಚಾಯಿತಿ ಅಧ್ಯಕ್ಷ ಸತೀಶ್ ಅಂಚನ್, ಮಾಜಿ ಅಧ್ಯಕ್ಷ ಸುನಿಲ್ ಆಳ್ವ, ಸದಸ್ಯ ಸುಭಾಷ್ ಶೆಟ್ಟಿ, ವಿಠಲ್ ಎನ್.ಎಂ., ಉಪ ತಹಸೀಲ್ದಾರ್ ದಿಲೀಪ್ ರೋಡ್ಕರ್, ವಿಲ್ಮಾ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net