ಗಾಂಧಿನಗರದ ಕಸದ ಗುತ್ತಿಗೆಯಲ್ಲಿ ನಕಲಿ ಬಿಲ್, ಶಾಸಕರಿಗೆ ತಿಳಿದಿಲ್ಲವೇ?

Dinesh Gundu Rao

ಬೆಂಗಳೂರು: ಗಾಂಧಿನಗರ ಕ್ಷೇತ್ರದಲ್ಲಿ ಕಳಪೆ ಕಾಮಗಾರಿ, ಅದಕ್ಷತೆಯ ಕೆಲಸ ನಡೆದಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಪ್ರಕಾಶ್ ಶೇಷರಾಘವಾಚಾರ್ ಆರೋಪಿಸಿದ್ದಾರೆ.
ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮೂರು ವರ್ಷಗಳಿಂದ ಕಸದ ಗುತ್ತಿಗೆಯಲ್ಲಿ 2 ಕೋಟಿ 37 ಲಕ್ಷ ರೂ. ನಕಲಿ ಬಿಲ್ ಮಾಡಿ ಹಣ ಪಡೆದ ಕುರಿತು ತನಿಖೆಗೆ ಆದೇಶಿಸಲಾಗಿದೆ. ಇದೇನೂ ಸಣ್ಣ ಮೊತ್ತವಲ್ಲ. ಶಾಸಕರ ಗಮನಕ್ಕೆ ಬರದೆ ಯಾವುದೇ ಬಿಲ್ ಪಾವತಿ ಆಗುವುದಿಲ್ಲ. ಸ್ಥಳೀಯ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಇದರ ಬಗ್ಗೆ ಮಾಹಿತಿ ಇಲ್ಲವೆಂದರೆ ಅದನ್ನು ನಂಬುವುದು ಹೇಗೆ ಎಂದು ಪ್ರಶ್ನಿಸಿದರು.
ತಮ್ಮ ಕ್ಷೇತ್ರದಲ್ಲಿ ಕಸ ವಿಲೇವಾರಿ ಆಗುತ್ತಿದೆಯೇ? ಸಮರ್ಪಕವಾಗಿ ಆಗುತ್ತಿದೆಯೇ? ಜನರಿಗೆ ಅನುಕೂಲಕರ ಆಗುತ್ತಿದೆಯೇ ಎಂಬುದಕ್ಕೆ ಗಮನ ಕೊಡದೇ ಇವರು ಕರ್ತವ್ಯದಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಸರ್ಕಾರ ಬಿಬಿಎಂಪಿ ವಿಶೇಷ ಕಮೀಷನರ್ ವಿಕಾಸ್ ಕಿಶೋರ್ ಎಂಬುವರನ್ನು ತನಿಖೆಗೆ ನೇಮಿಸಿದೆ. ಅಧಿಕಾರಿಗಳು ಕೈಜೋಡಿಸದೆ ಗುತ್ತಿಗೆದಾರ ಈ ಮೊತ್ತ ಪಡೆಯಲು ಸಾಧ್ಯವೇ ಇಲ್ಲ ಎಂದು ವಿವರಿಸಿದರು.
ಎಲ್ಲ ಸೇರಿ 2 ಕೋಟಿ ರೂ. ನುಂಗಿ ಹಾಕಿದಂತಿದೆ. ತನಿಖೆ ಮಾಡಿದರೆ ಅದೆಷ್ಟು ಕೋಟಿ ಆಚೆ ಬರುತ್ತದೋ ಗೊತ್ತಿಲ್ಲ ಎಂದು ತಿಳಿಸಿದರಲ್ಲದೇ, ಇವರ ಕ್ಷೇತ್ರದಲ್ಲಿ ಈಚೆಗೆ ಗೇಟ್ ಬಿದ್ದು ಮಗು ಸತ್ತುಹೋಗಿತ್ತು. ಕಳಪೆ ಕಾಮಗಾರಿಯಿಂದ ಹೀಗಾಗಿದೆ. ಆದರೆ ಗುತ್ತಿಗೆದಾರರ ಮೇಲೆ ಕೊಲೆ ಕೇಸ್ ಹಾಕಿಲ್ಲ. ಅಲ್ಲದೇ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಳಪೆ ಕಾಮಗಾರಿಗಳು ನಡೆಯುತ್ತಿವೆ. ಅದಕ್ಷತೆಯಿಂದ ಕೆಲಸಗಳು ನಡೆಯುತ್ತಿವೆ ಎಂದು ಆರೋಪಿಸಿದರು.

Share This Article

ಜಿಮ್​ಗೆ ಹೋಗದೇ, ಹಸಿವಿನಿಂದ ಬಳಲದೇ ಸುಲಭವಾಗಿ 18 ಕೆಜಿ ತೂಕ ಇಳಿಸಿದ ಯುವತಿ! ಹೇಗೆ ಗೊತ್ತಾ? Weight loss

Weight loss : ತೂಕ ಇಳಿಸಿಕೊಳ್ಳುವುದೆಂದರೆ ಸುಲಭದ ಮಾತಲ್ಲ. ಅದಕ್ಕಾಗಿ ದೃಢಸಂಕಲ್ಪ ಬೇಕು ಮತ್ತು ಇಷ್ಟದ…

ನಿದ್ರೆಯಲ್ಲಿದ್ದಾಗ ಎದೆ ಮೇಲೆ ಕೂತು ಯಾರೋ ಕತ್ತು ಹಿಸುಕಿದಂತೆ ಅನುಭವ ಆಗಿದೆಯೇ? ಕಾರಣವೇನು? ಇಲ್ಲಿದೆ ಮಾಹಿತಿ… Sleep Paralysis

Sleep Paralysis: ರಾತ್ರಿ ಮಲಗಿರುವಾಗ ದುಃಸ್ವಪ್ನಗಳು ಬರುವುದು ಸಾಮಾನ್ಯ. ಕೆಲವೊಮ್ಮೆ ಯಾರೋ ನಿಮ್ಮ ಎದೆಯ ಮೇಲೆ…