More

    ಖಾಸಗಿ ಬಸ್ ನಿಲ್ದಾಣದ ಅವ್ಯವಸ್ಥೆಗೆ ಶಾಸಕರೇ ದಂಗು

    ಶಿವಮೊಗ್ಗ: ನಗರದ ಸುಸಜ್ಜಿತ ಖಾಸಗಿ ಬಸ್ ನಿಲ್ದಾಣದಲ್ಲಿ ಸಂಜೆಯಾದರೆ ಕುಡುಕರ ಹಾವಳಿ ಹೆಚ್ಚುತ್ತದೆ. ಬಹಿರಂಗವಾಗಿಯೇ ವೇಶ್ಯಾವಾಟಿಕೆ ನಡೆಯುತ್ತಿದೆ. ಸ್ವಚ್ಛತೆ ಎಂಬುದು ಮರಿಚೀಕೆಯಾಗಿದೆ. ಇಡೀ ಬಸ್ ನಿಲ್ದಾಣ ದಿನವೇ ಗಬ್ಬೆದ್ದು ನಾರುತ್ತಿದೆ…

    ಇದು ಶಾಸಕ ಎಸ್.ಎನ್.ಚನ್ನಬಸಪ್ಪ ಅವರಿಗೆ ಬಸ್ ನಿಲ್ದಾಣದಲ್ಲಿ ಕಂಡುಬಂದ ದೃಶ್ಯಗಳು. ಶಾಸಕರಾದ ಬಳಿಕ ಮೊದಲ ಬಾರಿಗೆ ಖಾಸಗಿ ಬಸ್ ನಿಲ್ದಾಣಕ್ಕೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದ ಅವರಿಗೆ ವಾಸ್ತವತೆಯ ಅರಿವಾಯಿತು. ಪ್ರಯಾಣಿಕರು, ಅಂಗಡಿ ಮಾಲೀಕರು ದೂರುಗಳ ಸರಮಾಲೆಯನ್ನೇ ಪಟ್ಟಿ ಮಾಡಿದರು.
    ಮೇಯರ್ ಎಸ್.ಶಿವಕುಮಾರ್ ಮತ್ತು ಪಾಲಿಕೆ ಆಯುಕ್ತ ಕೆ.ಮಾಯಣ್ಣ ಗೌಡ ಅವರೊಂದಿಗೆ ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಶಾಸಕ ಚನ್ನಬಸಪ್ಪ ಅವರೇ ಇಲ್ಲಿನ ಅವ್ಯವಸ್ಥೆ ಕಂಡು ಒಂದು ಕ್ಷಣ ದಂಗಾದರು. ಸಮಸ್ಯೆ ಬಗೆಹರಿಸಬೇಕಾದ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.
    ಕುಡುಕರ ಹಾವಳಿ: ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ನಗರದಲ್ಲಿ ವಿಶೇಷ ಆಸಕ್ತಿ ವಹಿಸಿ ಸುಸಜ್ಜಿತ ಖಾಸಗಿ ಬಸ್ ನಿಲ್ದಾಣ ನಿರ್ಮಿಸಿದ್ದರು. ಆದರೆ ಈಗ ಆ ನಿಲ್ದಾಣದಲ್ಲಿ ಸಂಜೆಯಾದರೆ ಕುಡುಕರ ಕಾಟ ಮಿತಿ ಮೀರುತ್ತಿದೆ. ಹಾಡಹಗಲೇ ಕೆಲವರು ಕುಡಿದು ಎಲ್ಲೆಂದರಲ್ಲೇ ಮಲಗಿರುತ್ತಾರೆ. ಇದು ಪೊಲೀಸರ ಗಮನಕ್ಕಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಶಾಲಾ-ಕಾಲೇಜು ವಿದ್ಯಾರ್ಥಿನಿಯರು, ಹೆಣ್ಣು ಮಕ್ಕಳು ಓಡಾಡುವಂತಿಲ್ಲ ಎಂದು ಕೆಲ ಪ್ರಯಾಣಿಕರು ಶಾಸಕರಿಗೆ ದೂರು ನೀಡಿದರು.
    ಉಪಮೇಯರ್ ಲಕ್ಷ್ಮೀ ಶಂಕರನಾಯ್ಕ, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್, ಸದಸ್ಯ ಇ.ವಿಶ್ವನಾಥ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts