

ವಿಜಯವಾಣಿ ಸುದ್ದಿಜಾಲ ಹೆಬ್ರಿ
ಪೆರ್ಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕುಂಡಿ ಕೊರಗರ ಕಾಲನಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಲಾಖಾಧಿಕಾರಿಗಳೊಂದಿಗೆ ಸೋಮವಾರ ಭೇಟಿ ನೀಡಿದ್ದು, ವಸತಿ, ಕುಡಿಯುವ ನೀರಿನ ಸಮಸ್ಯೆ ಸಹಿತ ಮೂಲಸೌಕರ್ಯಗಳ ಲಭ್ಯತೆ ಕುರಿತು ಚರ್ಚಿಸಿದರು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಸಮುದಾಯದವರು ಶಿಕ್ಷಣದಲ್ಲಿ ಹಿಂದೆ ಉಳಿದಿದ್ದು, ಶೈಕ್ಷಣಿಕ ಯೋಜನೆಗೆ ಶ್ರಮಿಸಲಾಗುವುದು. ಏತ ನೀರಾವರಿ ಯೋಜನೆ, ವಸತಿ, ಹಾಗೂ ಮೂಲಸೌಕರ್ಯಕ್ಕೆ ಅಧಿಕಾರಿಗಳು ವಿಶೇಷ ಮುತ್ತುವರ್ಜಿ ವಹಿಸಿ ಜನಾಂಗದ ಕೆಲಸ ಮಾಡಿಕೊಡಬೇಕು ಎಂದು ಸೂಚಿಸಿದರು.
ಕಾಲನಿ ನಿವಾಸಿಗಳು ತಮ್ಮ ಸಮಸ್ಯೆಗಳ ಕುರಿತು ಶಾಸಕರಿಗೆ ಮನವಿ ಸಲ್ಲಿಸಿದರು. ಪೆರ್ಡೂರು ಗ್ರಾಪಂ ಅಧ್ಯಕ್ಷೆ ಚೇತನಾ ಶೆಟ್ಟಿ, ಉಪಾಧ್ಯಕ್ಷ ದೇವು ಪೂಜಾರಿ, ಪೆರ್ಡೂರು ಗ್ರಾಪಂ ಸದಸ್ಯರಾದ ತುಕಾರಾಮ್ ನಾಯಕ್, ಸಚಿನ್ ಪೂಜಾರಿ, ಪೆರ್ಡೂರು ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ್ ಸೆರ್ವೇಗಾರ್, ಕೊರಗ ಮುಖಂಡರಾದ ಬೊಗ್ರ ಕೊರಗ ಹಾಗೂ ಐಟಿಡಿಪಿ ಅಧಿಕಾರಿ ವಿಶ್ವನಾಥ್ ಉಪಸ್ಥಿತರಿದ್ದರು. ತುಕಾರಾಮ್ ನಾಯಕ್ ಪ್ರಸ್ತಾವನೆಗೈದರು.