ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಪೂರ್ಣ

download
Published on




ಮಂಗಳೂರು : ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾನ ಜೂ.3ರಂದು ಬೆಳಗ್ಗೆ 8ರಿಂದ ಸಾಯಂಕಾಲ 4ರವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಸಿದ್ಧತೆ ಪೂರ್ಣಗೊಂಡಿದೆ. ಜು.6ರಂದು ಮತಗಳ ಎಣಿಕೆ ಮೈಸೂರಿನಲ್ಲಿ ನಡೆಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ತಿಳಿಸಿದರು.
ದ.ಕ.ಜಿಲ್ಲೆಯಲ್ಲಿ ಪದವೀಧರ ಕ್ಷೇತ್ರದಲ್ಲಿ 24 ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ 16 ಕಡೆಗಳಲ್ಲಿ ಮತದಾನ ಕೇಂದ್ರ ತೆರೆಯಲಾಗಿದೆ .
ಪದವೀಧರ ಕ್ಷೇತ್ರದಲ್ಲಿ 19,971 ಮಂದಿ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ 8,189 ಮಂದಿ ಮತದಾರರಿದ್ದಾರೆ. ಈ ಚುನಾವಣೆಗೆ ಸಂಬಂಧಿಸಿ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಮತದಾನಕ್ಕೆ ಆಗಮಿಸುವಾಗ ಮತದಾರ ನೋಂದಣಿಯ ಸ್ಲಿಪ್ ಹಾಗೂ ವೋಟರ್ ಐಡಿ ತರಬೇಕು ಎಂದು ಅವರು ತಿಳಿಸಿದರು.
....................

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net