ವಿಶ್ವನಾಥ್​ ವಿರುದ್ಧ ತೀರ್ಪು: ಈಡುಗಾಯಿ ಹೊಡೆದು ಹರಕೆ ತೀರಿಸಿದ ಶಾಸಕ!

vishwanath
Published on

ಮೈಸೂರು: ಎಂಎಲ್​ಸಿ ಎಚ್​.ವಿಶ್ವನಾಥ್​ ಸಚಿವರಾಗಲು ಅನರ್ಹರು ಎಂದು ಹೈಕೋರ್ಟ್​ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಶಾಸಕ ಸಾ.ರಾ. ಮಹೇಶ್​ ಚಾಮುಂಡಿಬೆಟ್ಟಕ್ಕೆ ತೆರಳಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಿಗೆ 1001 ರೂ. ಕಾಣಿಕೆ ಸಲ್ಲಿಸಿ, ಈಡುಗಾಯಿ ಹೊಡೆದು ಹರಕೆ ತೀರಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವರ ಬಳಿ ಆಣೆ ಪ್ರಮಾಣ ನಡೆದು ಸರಿಯಾಗಿ ಒಂದು ವರ್ಷಕ್ಕೆ ಸತ್ಯ ಯಾವುದು ಎಂಬುದು ತೀರ್ಮಾನವಾಗಿದೆ. ಇದು ವಿಶ್ವನಾಥ್​ಗೆ ದೇವರುಕೊಟ್ಟ ಶಿಕ್ಷೆ. ಚಾಮುಂಡಿ ತಾಯಿ ನ್ಯಾಯ ದೇವತೆ, ತಪ್ಪು ಮಾಡಿದವರಿಗೆ ಶಿಕ್ಷೆ ಕೊಟ್ಟಿದ್ದಾಳೆ ಎಂದರು.

ಅನರ್ಹಗೊಂಡಿದ್ದ 16 ಜನರಿಗೆ ಯಾವುದೇ ಸಮಸ್ಯೆ ಆಗಿಲ್ಲ. ಆದರೆ, ವಿಶ್ವನಾಥ್​ ಒಬ್ಬರಿಗೆ ಮಾತ್ರ ಸರಿಯಾದ ಶಿಕ್ಷೆ ಆಗಿದೆ. ಇದರ ಅರ್ಥ ದೇವರ ಮುಂದೆ ಅವರು ಹೇಗೆ ನಡೆದುಕೊಂಡರು ಎಂಬುದು ಗೊತ್ತಾಗುತ್ತದೆ ಎಂದು ಸಾ.ರಾ.ಮಹೇಶ್​ ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net