More

    ಸಿಎನ್​ಜಿ ಸಮಸ್ಯೆ ನಿವಾರಿಸಲು ಕೋಟ ಪೂಜಾರಿ ಮನವಿ

    ಕೇಂದ್ರ ಸಚಿವ ಹಾರ್ದಿಕ್​ ಸಿಂಗ್​ಗೆ ಇ-ಮೇಲ್​ ಮೂಲಕ ಪತ್ರ

    ಉಡುಪಿ: ಜಿಲ್ಲೆಯ ಉಡುಪಿ, ಕುಂದಾಪುರ, ಬೈಂದೂರು ಇತ್ಯಾದಿ ಪ್ರದೇಶಗಳಲ್ಲಿ ಸಿಎನ್​ಜಿ ಕೊರತೆಯಿಂದಾಗಿ ಪಂಪ್​ಗಳ ಮುಂದೆ ವಾಹನಗಳು ಸರತಿ ಸಾಲಿನಲ್ಲಿ ನಿಲ್ಲುವಂತಾಗಿದ್ದು, ಚಾಲಕರು ಮತ್ತು ಮಾಲೀಕರು ಸಂಕಷ್ಟಕ್ಕೆ ಈಡಾಗಿದ್ದಾರೆ. ಹೀಗಾಗಿ ವಿಧಾನ ಪರಿಷತ್​ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಸಂಪನ್ಮೂಲ ಸಚಿವ ಹಾರ್ದಿಕ್​ ಸಿಂಗ್​ ಪುರಿ ಅವರಿಗೆ ಇ-ಮೇಲ್​ ಮೂಲಕ ಪತ್ರ ಬರೆದು ಕೂಡಲೇ ಸಮಸ್ಯೆ ನಿವಾರಿಸುವಂತೆ ಒತ್ತಾಯಿಸಿದ್ದಾರೆ.

    ಡಿಸಿ ವಿದ್ಯಾಕುಮಾರಿ ಭೇಟಿ

    ಉಡುಪಿ ಜಿಲ್ಲೆಯಲ್ಲಿ ಸಿಎನ್​ಜಿ ಕೊರತೆಯಿಂದಾಗಿ ಆಗುತ್ತಿರುವ ಸಮಸ್ಯೆ ಹಿನ್ನೆಲೆಯಲ್ಲಿ ಕೋಟ ಪೂಜಾರಿ ಅವರು ಶನಿವಾರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರನ್ನು ಭೇಟಿಯಾಗಿ ಚರ್ಚಿಸಿದರು. ಸಿಎನ್​ಜಿ ಸರಬರಾಜು ಜವಾಬ್ದಾರಿ ಅದಾನಿ ಸಂಸ್ಥೆಯದ್ದಾಗಿದ್ದು, ತಾಂತ್ರಿಕ ತೊಂದರೆಯಿಂದ ಮತ್ತು ಹೆಚ್ಚುವರಿ ಬೇಡಿಕೆಯಿಂದ ಸಮಸ್ಯೆ ಆಗಿದ್ದಾಗಿ ಸಂಸ್ಥೆ ಒಪ್ಪಿಕೊಂಡಿದೆ. ಸಮಸ್ಯೆ ನಿವಾರಿಸುವುದಾಗಿಯೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ನನಗೆ ತಿಳಿಸಿದ್ದಾರೆ. ಜಿಲ್ಲೆಯಲ್ಲಿರುವ ಸಿಎನ್​ಜಿ ಬೇಡಿಕೆ ಪರಿಶೀಲಿಸಿ, ತಾವು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ವಿನಂತಿಸಿದರು.

    ಪೆಟ್ರೋಲಿಯಂ ಸಚಿವಾಲಯಕ್ಕೆ ಶಾಸಕ ಯಶ್​ಪಾಲ್​ ಟ್ವೀಟ್​

    ಉಡುಪಿ: ಜಿಲ್ಲಾದ್ಯಂತ ಸಿಎನ್​ಜಿ ಪಂಪ್​​ಗಳಲ್ಲಿ ಇಂಧನ ಕೊರತೆಯಿಂದ ಆಟೋ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ ನಿಮಾರ್ಣವಾಗಿದ್ದು, ಉಡುಪಿ ಜಿಲ್ಲೆಗೆ ನಿರಂತರ ಸಿಎನ್​ಜಿ ಪೂರೈಕೆಗೆ ಕ್ರಮ ವಹಿಸಬೇಕೆಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ಶಾಸಕ ಯಶ್​ಪಾಲ್​ ಸುವರ್ಣ ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ.

    ಜಿಲ್ಲೆಯಲ್ಲಿ ಸಾವಿರಕ್ಕೂ ಅಧಿಕ ಆಟೋಗಳು ಹಾಗೂ ಇತನ್ನಿರ ವಾಹನಗಳು ಸಿಎನ್​ಜಿ ಇಂಧನವನ್ನೇ ಅವಲಂಬಿಸಿದ್ದು, ಸಿಎನ್​ಜಿ ತೀವ್ರ ಕೊರತೆಯಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ದಿನೇದಿನೆ ಸಿಎನ್​ಜಿ ವಾಹನಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಲೇ ಇದೆ. ಆದರೂ ಸಿಎನ್​ಜಿ ಪಂಪ್​ಗಳ ಕೊರತೆಯಿಂದಲೂ ವಾಹನ ಮಾಲೀಕರು, ಆಟೋ ಚಾಲಕರು ಬಾಡಿಗೆ ಬಿಟ್ಟು ಪಂಪ್​ಗಳ ಮುಂದೆ ಕಾಯುವ ಪರಿಸ್ಥಿತಿ ಎದುರಾಗಿದೆ. ಶೀಘ್ರದಲ್ಲಿಯೇ ಪೆಟ್ರೋಲಿಯಂ ಸಚಿವಾಲಯದ ಮಂತ್ರಿ ಹಾಗೂ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಉಡುಪಿ ಜಿಲ್ಲೆಯಲ್ಲಿ ಸಿಎನ್​ಜಿ ಕೊರತೆಯಿಂದ ಆಟೋ ಚಾಲಕರು ಅನುಭವಿಸುತ್ತಿರುವ ಸಮಸ್ಯೆ ಹಾಗೂ ಇಂಧನ ಕೊರತೆಗೆ ಕಾರಣಗಳ ಕುರಿತು ಮೇ 3ರ ಸಂಚಿಕೆಯಲ್ಲಿ ವಿಜಯವಾಣಿ ವಿಸ್ತೃತ ವಿಶೇಷ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts