ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜೀನಾಮೆಗೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

12_mn Prathap Simha Nayak 3
Published on


ಮಂಗಳೂರು : ಸಿದ್ಧರಾಮಯ್ಯ ಅವರು ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದ್ದಾರೆ.
ರಾಜ್ಯಪಾಲರು ವಿವೇಚನಾಯುತವಾಗಿ ಆದೇಶ ಹೊರಡಿಸಿದ್ದಾರೆ ಎಂಬುದಾಗಿ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ. ಇದು ಮುಖ್ಯಮಂತ್ರಿ ಮತ್ತು ಅವರ ಬೆಂಬಲಿಗರ ಆರೋಪಗಳು ಸುಳ್ಳು ಎಂಬುದನ್ನು ಎತ್ತಿ ತೋರಿಸಿದೆ. ಆದರೆ ಸಿದ್ಧರಾಮ್ಯ ಅವರು ಇನ್ನೂ ತನಿಖೆ ವಿರೋಧಿಸುತ್ತಿರುವುದು ನಾಚಿಕೆಗೇಡಿತನವಾಗಿದೆ. ಕಾಂಗ್ರೆಸ್‌ನಲ್ಲೇ ಮುಖ್ಯಮಂತ್ರಿ ಕುರ್ಚಿ ಮೇಲೆ ಟವೆಲ್ ಹಾಕಿ ಕಾದಿರುವ ಕೆಲವು ಮುಖಂಡರು ಕೂಡಾ ಸಿದ್ಧರಾಮಯ್ಯ ಅವರು ಕೆಳಗಿಳಿಯುವುದನ್ನು ಕಾಯುತ್ತಿರುವುದು ಈಗ ಗುಟ್ಟಾಗಿ ಉಳಿದಿಲ್ಲ ಎಂದು ಅವರು ಹೇಳಿದ್ದಾರೆ.
ಸತ್ಯ ಹರಿಶ್ಚಂದ್ರನಂತೆ ಫೋಸ್ ಕೊಡುವ ಸಿದ್ಧರಾಮಯ್ಯ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿಚಾರದಲ್ಲೀ ಭಾರೀ ನೈತಿಕತೆಯ ಬಗ್ಗೆ ಮಾತನಾಡಿದ್ದರು. ಆದರೆ ಈಗ ರಾಜೀನಾಮೆ ನೀಡುವುದಿಲ್ಲ ಎನ್ನುವುದು ಭಂಡತನ ಅಲ್ಲದೆ ಮತ್ತೇನು? ಮುಕ್ತ ತನಿಖೆಗೆ ಅವಕಾಶ ಕಲ್ಪಿಸಲು ನೈತಿಕ ಆಧಾರದಲ್ಲಿ ಅವರು ಮುಖ್ಯಮಂತ್ರಿ ಸ್ಥಾನ ತ್ಯಜಿಸುವುದು ಅನಿವಾರ್ಯವಾಗಿದೆ ಎಂದು ಪ್ರತಾಪಸಿಂಹ ನಾಯಕ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net