ನೂತನ ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಭಾನುಮತಿ

Mayor
ಉಪಮೇಯರ್ ಭಾನುಮತಿ, ಮೇಯರ್ ಮನೋಜ್ ಕುಮಾರ್
Published on

ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಆಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್. ಆಯ್ಕೆಯಾಗಿದ್ದಾರೆ.ಗುರುವಾರ ಮಂಗಳೂರು ಪಾಲಿಕೆಯಲ್ಲಿ ಮೇಯರ್ ಉಪಮೇಯರ್ ಹುದ್ದೆಗೆ ಚುನಾವಣೆ ನಡೆಯಿತು.

ಮೇಯರ್ ಹುದ್ದೆಗೆ "ಎಸ್ ಸಿ" ಮೀಸಲಾತಿಯಡಿ ಕಾಂಗ್ರೆಸ್ ಅಭ್ಯರ್ಥಿಗಳು ಇಲ್ಲದ ಕಾರಣದಿಂದ ಮೇಯರ್ ಆಯ್ಕೆ ಅವಿರೋಧವಾಗಿ ನಡೆಯುವಂತಾಯಿತು. ಪಾಲಿಕೆಯಲ್ಲಿ ಪ್ರಸಕ್ತ ಬಿಜೆಪಿ ಆಡಳಿತ ಮುಂದಿನ ವರ್ಷದ ಫೆಬ್ರವರಿ 27 ರವರೆಗೆ ಇರುವ ಕಾರಣದಿಂದ ಸುಮಾರು ಐದೂವರೆ ತಿಂಗಳು ಮಾತ್ರ ಮೇಯರ್ ಉಪಮೇಯರ್ ಅಧಿಕಾರಾವಧಿ ಇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net