ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ; ಮಾನವ ಬಂಧುತ್ವ ಗಟ್ಟಿಗೆ ಮಾನವ ಸರಪಳಿ

ಮೂಲಭೂತ ಹಕ್ಕುಗಳ ರಕ್ಷಿಸುವುದೇ ಪ್ರಜಾಪ್ರಭುತ್ವ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ:ವಿವಿಧತೆಯಲ್ಲಿ ಏಕತೆ ತೋರುವ ನಮ್ಮ‌‌ ಹೆಮ್ಮೆಯ ರಾಷ್ಟ್ರದ ವೈವಿಧ್ಯಮಯ ಧ್ವನಿಗಳ ಅಭಿವ್ಯಕ್ತಿಗೆ ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಗೆ ಅವಕಾಶ ನೀಡುವ ಆಡಳಿತದ ವ್ಯವಸ್ಥೆಯೇ ಪ್ರಜಾಪ್ರಭುತ್ವದ ಜೀವಾಳವಾಗಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ‌ ಅವರು ನುಡಿದರು.

ಬೆಳಗಾವಿ ಸುವರ್ಣ ವಿಧಾ‌ನ ಸೌಧದಲ್ಲಿ‌ ರವಿವಾರ (ಸೆ.15) ಜರುಗಿದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಗೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವವು ಸ್ವಾತಂತ್ರ್ಯ, ಸಮಾನತೆ ಮತ್ತು ನ್ಯಾಯಕ್ಕಾಗಿ ನಮ್ಮ ಅತ್ಯುನ್ನತ ಆಕಾಂಕ್ಷೆಗಳನ್ನು ಸಾಕಾರಗೊಳಿಸುವ ಶಕ್ತಿಯುತ ಮತ್ತು ಕ್ರಿಯಾತ್ಮಕ‌ ಶಕ್ತಿಯಾಗಿದೆ ಎಂದರು.

ಭಾರತ ದೇಶವು ಅತ್ಯಂತ ಭವ್ಯ, ಶಕ್ತಿಶಾಲಿ ಮತ್ತು ಯಶಸ್ವಿ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ ದೇಶವಾಗಿದೆ. ದೇಶದಲ್ಲಿ ಪರಿಣಾಮಕಾರಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮೂಲಧಾರೆ ಡಾ.ಬಿ.ಆರ್.ಅಂಬೇಡ್ಕರ್ ಅವರಿಂದ ರಚಿತವಾದ ಸಂವಿಧಾನ.

2007ರಲ್ಲಿ ಜರುಗಿದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೆಪ್ಟೆಂಬರ್ 15ರ ದಿನವನ್ನು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವೆಂದು ಘೋಷಣೆ ಮಾಡಿ ವಿಶ್ವಾದ್ಯಂತ ಪ್ರಜಾಪ್ರಭಯತ್ವದ ಮೌಲ್ಯಗಳು, ಆದರ್ಶಗಳು, ತತ್ವಗಳು ಮತ್ತು ಅದರ ಅನ್ವಯಿಕತೆಯನ್ನು ಒಳಗೊಂಡ ಬೃಹತ ನಿರ್ಣಯ ಹೊರಡಿಸಿದ ಐತಿಹಾಸಿಕ ದಿನವಾಗಿದೆ.

ಪ್ರಜಾಪ್ರಭುತ್ವದ ಮೂಲಭೂತ ಹಕ್ಕು‌ ಮತ್ತು
ಸಾರ್ವತ್ರಿಕ ಮೌಲ್ಯವಾಗಿದೆ. ಪ್ರಜಾಪ್ರಭುತ್ವ ರಕ್ಷಿಸುವುದು, ಅದರ ಮೌಲ್ಯಗಳನ್ನು ಉತ್ತೇಜಿಸಿವುದು ಹಾಗೂ ಪ್ರಜಾಪ್ರಭುತ್ವ ಅಲ್ಲದ ರಾಷ್ಟ್ರಗಳು ಪ್ರಜಾಪ್ರಭುತ್ವ ವ್ಯವಸ್ಥೆ ಅಳವಡಿಸಿಕೊಳ್ಳಲು ಬೆಂಬಲಿಸುವದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಉದ್ದೇಶವಾಗಿದೆ.

ಮಾನವ ಬಂಧುತ್ವ ಗಟ್ಟಿಗೊಳಿಸುವ ಮಾನವ ಸರಪಳಿ:

ರಾಜ್ಯವು ಪ್ರಜಾಪ್ರಭುತ್ವ ದಿನಾಚರಣೆಯನ್ನು ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ 2500 ಕಿ.ಮಿ ಉದ್ದದ ಮಾನವ ಸರಪಳಿಯನ್ನು ನಿರ್ಮಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಜಿಲ್ಲೆಯಲ್ಲಿ ರಾಮದುರ್ಗ ತಾಲೂಕಿನ ಸಾಲಹಳ್ಳಿಯಿಂದ ಕಿತ್ತೂರ ತಾಲೂಕಿನ ತೇಗೂರ ಗ್ರಾಮದವರೆಗೆ 145 ಕಿ.ಮೀ ಮಾನವ ಸರಪಳಿಯನ್ನು ನಿರ್ಮಿಸಿ ಮಾನವ ಬಂಧುತ್ವವನ್ನು ಯಶ್ವಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಕರೆ ನೀಡಿದರು.

ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು‌ ಮಾತನಾಡಿ, ಮಾನವಿಯತೆಯ‌ ಮೌಲ್ಯಗಳ ಸಂದೇಶ ಸಾರುವ ಈ ವಿಶ್ವ ದಾಖಲೆಯ ಕಾರ್ಯಕ್ರಮವು ಅಭೂತಪೂರ್ವವಾಗಿದೆ. ಇಡೀ ವಿಶ್ವವವೇ ನಮ್ಮ ರಾಜ್ಯದ ತಿರುಗಿ ನೀಡುವಂತಹ ಕಾರ್ಯಕ್ರಮವಾಗಿದೆ ಎಂದರು.
ಸರಕಾರದ ಯಾವುದೇ ಕಾರ್ಯಕ್ರಮ‌ ಯಶಸ್ವಿಯಾಗಬೇಕಾದರೆ ಅಧಿಕಾರಿಗಳ ಪಾತ್ರ ಮಹತ್ವದಾಗಿದೆ. ಸಂವಿಧಾನದಲ್ಲಿನ‌ ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಲು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕರುಗಳಾದ ಆಸಿಫ್(ರಾಜು) ಸೇಠ, ವಿಠ್ಠಲ‌ ಹಲಗೇಕರ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ಪೋಲಿಸ್ ಆಯುಕ್ತ ಯಡಾ‌ ಮಾರ್ಟಿನ‌ ಮಾರ್ಬನ್ಯಾಂಗ, ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿ.ಪಂ.ಸಿ.ಇ.ಓ. ರಾಹುಲ್ ಶಿಂಧೆ, ಪ್ರಶಿಕ್ಷಣಾರ್ಥಿ ಆಯ್.ಎ.ಎಸ್. ಅಧಿಕಾರ ದಿನೇಶಕುಮಾರ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಡಿ.ಸಿ.ಪಿ. ರೊಹನ್ ಜಗದೀಶ, ಜಿಲ್ಲೆಯ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿ ಸಿಬ್ಬಂದಿಗಳು, ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೆಶಕ ರಾಮನಗೌಡ ಕನ್ನೋಳಿ ಸ್ವಾಗತಿಸಿದರು. ಕು.ಸ್ವಾತಿ ಸಂವಿಧಾನ ಪಿಠೀಕೆಯನ್ನು ಬೋಧಿಸಿದರು.

ಬೃಹತ್ ಮಾನವ ಸರಪಳಿ:

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರನಿಂದ ಚಾಮರಾಜ‌ನಗರದ ವರೆಗೆ ರಾಜ್ಯದ 31 ಜಿಲ್ಲೆಗಳನ್ನು ಒಳಗೊಂಡಿರುವ ಅತಿ ಉದ್ದದ ಮಾನವ ಸರಪಳಿಯನ್ನು ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿಯಿಂದ ಕಿತ್ತೂರಿನ ತೇಗೂರ ಗ್ರಾಮದ ವರಗೆ ಅಂದಾಜು 145 ಕಿ.ಮಿ ಉದ್ಧದ ಮಾನವ ಸರಪಳಿಯನ್ನು ನಿರ್ಮಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸಂಘ ಸಂಸ್ಥೆಗಳು ಸ್ವಯಂ ಪ್ರೇರಿತರಾಗಿ ಮಾನವ ಸರಪಳಿಯನ್ನು ನಿರ್ಮಿಸುವದರ ಮೂಲಕ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮಹತ್ವ ಸಾರುವ ಸಂವಿಧಾನ‌ ಪಿಠೀಕೆಯನ್ನು ಸಾಮೂಹಿಕವಾಗಿ ವಾಚಿಸಲಾಯಿತು.
***

Share This Article

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…