More

    ಹಾಸ್ಟೆಲ್​ನಲ್ಲಿ ನಮಾಜ್‌ ಮಾಡಿದ ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ: ಐವರಿಗೆ ಗಾಯ

    ಅಹಮದಾಬಾದ್: ಗುಜರಾತ್ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳು ನಮಾಜ್​ ಮಾಡಿದ್ದು ಇವರ ಮೇಲೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ದಾಳಿಯಲ್ಲಿ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಹಾಸ್ಟೆಲ್‌ ಆವರಣದಲ್ಲಿ ವಿದೇಶಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

    ಇದನ್ನೂ ಓದಿ: ದೆಹಲಿ ಮದ್ಯ ನೀತಿ ಹಗರಣ: ಮಾಜಿ ಸಿಎಂ ಕೆಸಿಆರ್ ಪುತ್ರಿ ಕವಿತಾ ಮಾ.23ರ ವರೆಗೆ ಇಡಿ ವಶಕ್ಕೆ 

    ರಂಜಾನ್‌ ಹಿನ್ನೆಲೆಯಲ್ಲಿ ಐವರು ವಿದೇಶಿ ವಿದ್ಯಾರ್ಥಿಗಳು ಶನಿವಾರ ಸಂಜೆ (ಮಾ.16) ನಮಾಜ್‌ ಮಾಡಿದ್ದಾರೆ. ನಮಾಜ್‌ ಮಾಡಿದವರು ಅಫಘಾನಿಸ್ತಾನ, ಉಜ್ಬೇಕಿಸ್ತಾನದ ಸೇರಿ ಹಲವು ದೇಶಗಳ ವಿದ್ಯಾರ್ಥಿಗಳು ಎನ್ನಲಾಗಿದೆ.

    ಮಾಹಿತಿ ತಿಳಿಯುತ್ತಿದ್ದಂತೆ ಉದ್ರಿಕ್ತ ಗುಂಪೊಂದು ದೊಣ್ಣೆ, ಚಾಕುವಿನಿಂದ ಹಾಸ್ಟೆಲ್‌ಗೆ ನುಗ್ಗಿದ್ದಾರೆ. ಐವರೂ ವಿದೇಶಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಹಾಸ್ಟೆಲ್‌ ಸೆಕ್ಯುರಿಟಿ ಗಾರ್ಡ್‌ ಅವರನ್ನು ತಡೆಯಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಈ ಸಂದರ್ಭದಲ್ಲಿ ಲ್ಯಾಪ್‌ಟಾಪ್‌ಗಳು, ಫೋನ್‌ಗಳು ಮತ್ತು ಬೈಕ್‌ಗಳನ್ನು ಹಾನಿಗೊಳಿಸಿದ್ದಾರೆ ಎಂದು ಎಂದು ತಿಳಿದುಬಂದಿದೆ.

    ಗಾಯಗೊಂಡ ಐವರು ವಿದ್ಯಾರ್ಥಿಗಳ ಪೈಕಿ ಅಫ್ಘಾನಿಸ್ತಾನ, ಶ್ರೀಲಂಕಾ ಮತ್ತು ತುರ್ಕಮೆನಿಸ್ತಾನ್‌ನ ತಲಾ ಒಬ್ಬರು ಮತ್ತು ಆಫ್ರಿಕನ್ ದೇಶಗಳ ಇಬ್ಬರು ಸೇರಿದ್ದಾರೆ ಎನ್ನಲಾಗಿದೆ.

    ದಾಳಿ ಮಾಡಿದವರು ಯಾವ ಸಂಘಟನೆಗೆ ಸೇರಿದವರು ಎಂಬ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ದಾಳಿಯಿಂದಾಗಿ ಗುಜರಾತ್‌ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಹಾಗೂ ವಿವಿ ಹಾಸ್ಟೆಲ್‌ನಲ್ಲಿ ತಂಗಿರುವ ವಿದ್ಯಾರ್ಥಿಗಳಿಗೆ ಭಯ ಉಂಟಾಗಿದೆ. ವಿದೇಶಿ ವಿದ್ಯಾರ್ಥಿಗಳ ಮೇಲಿನ ದಾಳಿಯನ್ನು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಖಂಡಿಸಿದ್ದಾರೆ. ಪ್ರಕರಣದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

    ಈ ಘಟನೆ ಕುರಿತು ರಾಜ್ಯ ಗೃಹ ಸಚಿವ ಹರ್ಷ ಸಾಂಘವಿ ಅವರು ಗುಜರಾತ್‌ನ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸಲು ಮತ್ತು ನ್ಯಾಯಯುತ ತನಿಖೆ ನಡೆಸಲು ಸೂಚಿಸಿದ್ದಾರೆ ಎಂದು ವರದಿಯಾಗಿದೆ.

    14 ವಯಸ್ಸಿನ ಬಾಲಕಿಯನ್ನು ಗರ್ಭಿಣಿಯಾಗಿಸಿದ 43ರ ವಯಸ್ಕರ: ಅಬಾರ್ಶನ್​ಗೆ ಒಪ್ಪದ ಕಾರಣ ಭೀಕರ ಹತ್ಯೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts